ADVERTISEMENT

ಮುಳಬಾಗಿಲು: ಅರಣ್ಯ ಭೂಮಿ ಒತ್ತುವರಿ ತೆರವು

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 6:52 IST
Last Updated 10 ನವೆಂಬರ್ 2025, 6:52 IST
ಮುಳಬಾಗಿಲು ತಾಲ್ಲೂಕಿನ ಕುನಿಬಂಡೆ ಬಳಿ ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು
ಮುಳಬಾಗಿಲು ತಾಲ್ಲೂಕಿನ ಕುನಿಬಂಡೆ ಬಳಿ ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು   

ಮುಳಬಾಗಿಲು: ಗೂಕುಂಟೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯು ಶುಕ್ರವಾರ ಮುಂಜಾನೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿತು. ಸರ್ವೆ ನಂಬರ್ 33ರಲ್ಲಿ 66 ಎಕರೆ ಅರಣ್ಯ ಭೂಮಿ ಒತ್ತುವರಿ ಬಗ್ಗೆ ದೂರು ಸಲ್ಲಿಕೆಯಾಗಿತ್ತು. 

ಕಾರ್ಯಾಚರಣೆ ಸಮಯದಲ್ಲಿ ಕುನಿಬಂಡೆ ಗ್ರಾಮದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರೈತರು ತಮ್ಮ ಬಳಿ ಭೂಮಿ ದಾಖಲೆ, ಸಾಗುವಳಿ ಚೀಟಿ ಮತ್ತು ಕಂದಾಯ ಪಾವತಿ ರಸೀದಿಗಳಿವೆ ಎಂದು ತಿಳಿಸಿದರು. ನ್ಯಾಯಾಲಯದಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದೆ. ಯಾವುದೇ ಮುನ್ಸೂಚನೆ ನೀಡದೆ ತೆರವು ಕಾರ್ಯಾಚರಣೆ ನಡೆಸುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್, ಈ ಜಾಗ ಅರಣ್ಯ ಭೂಮಿಗೆ ಸೇರಿದೆ. ಒತ್ತುವರಿ ತೆರವು ಮಾಡಲು ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ. ರೈತರ ಮನವಿ ಗಮನದಲ್ಲಿಟ್ಟುಕೊಂಡು ಅವರ ಬೆಳೆಗೆ ಹಾನಿ ಮಾಡದೆ ಕಟಾವು ಮಾಡಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.