ADVERTISEMENT

ತೆಲುಗು ಸಿನಿಮಾ ಹಾಡಿಗೆ ರಮೇಶ್‌ ಕುಮಾರ್ ಭರ್ಜರಿ ಸ್ಟೆಪ್ಸ್‌!

​ಪ್ರಜಾವಾಣಿ ವಾರ್ತೆ
Published 7 ಜೂನ್ 2022, 1:37 IST
Last Updated 7 ಜೂನ್ 2022, 1:37 IST
ಶ್ರೀನಿವಾಸಪುರದಲ್ಲಿ ಭಾನುವಾರ ರಾತ್ರಿ ಜನ್ಮಭೂಮಿ ವೇದಿಕೆ ವತಿಯಿಂದ ‘ಶ್ರೀನಿವಾಸಪುರ ಹಬ್ಬ’ದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ತೆಲುಗು ಚಿತ್ರಗೀತೆಯೊಂದಕ್ಕೆ ಹೆಜ್ಜೆ ಹಾಕಿದರು
ಶ್ರೀನಿವಾಸಪುರದಲ್ಲಿ ಭಾನುವಾರ ರಾತ್ರಿ ಜನ್ಮಭೂಮಿ ವೇದಿಕೆ ವತಿಯಿಂದ ‘ಶ್ರೀನಿವಾಸಪುರ ಹಬ್ಬ’ದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರು ತೆಲುಗು ಚಿತ್ರಗೀತೆಯೊಂದಕ್ಕೆ ಹೆಜ್ಜೆ ಹಾಕಿದರು    

ಶ್ರೀನಿವಾಸಪುರ:ಪಟ್ಟಣದಲ್ಲಿ ಭಾನುವಾರ ರಾತ್ರಿ ಜನ್ಮಭೂಮಿ ವೇದಿಕೆ ವತಿಯಿಂದ ಶ್ರೀನಿವಾಸಪುರ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್, ತೆಲುಗು ಚಿತ್ರಗೀತೆಗಳಿಗೆ ದಣಿವರಿಯದೆ ಕುಣಿಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗಾಯಕಿ ಮಂಗ್ಲಿ ಅವರ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆ ಸಂದರ್ಭದಲ್ಲಿ ವೇದಿಕೆ ಮೇಲಿದ್ದ ಶಾಸಕ ರಮೇಶ್ ಕುಮಾರ್ ಅವರನ್ನು ಹಾಡೊಂದಕ್ಕೆ ಕುಣಿಯುವಂತೆ ಕೇಳಿಕೊಳ್ಳಲಾಯಿತು. ಅವರು ಮೊದಲು ನಿರಾಕರಿಸಿದರಾದರೂ ಪ್ರೇಕ್ಷಕರಿಂದ ಒತ್ತಾಯ ಹೆಚ್ಚಿದಾಗ ಖ್ಯಾತ ನಟ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರು ನಟಿಸಿದ್ದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕುವ ಮೂಲಕ ಅಚ್ಚರಿ ಉಂಟು ಮಾಡಿದರು.

ಪ್ರೇಕ್ಷಕರ ಸಿಳ್ಳು ಹಾಗೂ ಪ್ರೋತ್ಸಾಹದ ನುಡಿಗಳಿಂದ ಉತ್ತೇಜಿತರಾದ ರಮೇಶ್ ಕುಮಾರ್, ಸುಮಾರು ಅರ್ಧ ಗಂಟೆ ಕಾಲ ಬೇರೆ ಬೇರೆ ಹಾಡುಗಳಿಗೆ ಹೆಜ್ಜೆ ಹಾಕಿ ಪ್ರೇಕ್ಷಕರ ಜೋರು ಚಪ್ಪಾಳೆ ಗಿಟ್ಟಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.