ADVERTISEMENT

ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ: ಬಂಧನ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 5:24 IST
Last Updated 2 ಜೂನ್ 2022, 5:24 IST

ಮುಳಬಾಗಿಲು: ಉದ್ಯೋಗ ಕೊಡಿಸುವ ನೆಪದಲ್ಲಿ ಎರಡು ಮೊಬೈಲ್ ಮತ್ತು ₹ 70 ಸಾವಿರ ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಪಲಮನೇರು ಪಟ್ಟಣದ ವಾಸಿ ಹರಿಕೃಷ್ಣ ಬಂಧಿತ.

ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳೇ ಈತನ ಗುರಿಯಾಗಿದ್ದರು. ಅವರನ್ನು ಸಂಪರ್ಕಿಸಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಲ್ಲೂಕಿನ ದೇವರಾಯಸಮುದ್ರ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮುಗಿಸಿದ ಕೆಲವು ವಿದ್ಯಾರ್ಥಿಗಳಿಗೆ ಹಣ ಪಡೆದು ವಂಚಿಸಿದ್ದ ಬಗ್ಗೆ ಈತನ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಲ್ಲೂಕಿನ ಕದರೀಪುರ ಗ್ರಾಮದಲ್ಲಿ ಐಐಟಿ ಮುಗಿಸಿದ್ದ ಇಬ್ಬರು ಯುವಕರಿಗೂ ಕೆಲಸ ಕೊಡಿಸುವುದಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಹೋಟೆಲ್‌ ವೊಂದರಲ್ಲಿಅವರೊಂದಿಗೆ ವಾಸ್ತವ್ಯವಿದ್ದ. ಯುವಕರು ಸ್ನಾನಕ್ಕೆ ಹೋದಾಗ ಅವರ ಮೊಬೈಲ್ ಮತ್ತು ಹಣ ದೋಚಿ ಆರೋಪಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಪ್ರದೀಪ್‌ ಸಿಂಗ್‌ ನೇತೃತ್ವದ ತಂಡ ಪಲಮನೇರು ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.