ಮಾಲೂರು: ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ 700 ಗ್ರಾಂ ತೆನೆ, ಹೂ, ಬೀಜ ಮಿಶ್ರಿತ ಒಣ ಗಾಂಜಾವನ್ನು ಮಾಲೂರು ಅಬಕಾರಿ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ.
ತಾಲ್ಲೂಕಿನ ನೊಸಗೆರೆ ಗ್ರಾಮದ 3ನೇ ಹಂತ, ಕೆ.ಐ.ಎ.ಡಿ.ಬಿ ಕೈಗಾರಿಕಾ ಪ್ರದೇಶದ ಬಳಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಲಾಗಿದ್ದ ಗಾಂಜಾ ಜಪ್ತಿ ಮಾಡಿದ ಪೊಲೀಸರು ಆರೋಪಿಗಳಾದ ಒರಿಸ್ಸಾದ ಜಮಾದನ್ ಸಮಾಲ್ (38), ಉತ್ತರ ಪ್ರದೇಶದ ವಿಶಾಲ್ ಚೌವ್ಹಾಣ್ (20) ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಾಹನ ಸೇರಿ ಒಟ್ಟು ₹57 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅಬಕಾರಿ ಇಲಾಖೆಯ ನಿರೀಕ್ಷಕ ಜಿ. ಬಾಲಕೃಷ್ಣ ತಿಳಿಸಿದ್ದಾರೆ.
ದಾಳಿಯಲ್ಲಿ ಅಬಕಾರಿ ಉಪ ಅಧೀಕ್ಷಕ ಶ್ರೀನಿವಾಸಮೂರ್ತಿ, ಕೋಲಾರ ಉಪ ವಿಭಾಗ ಅಧಿಕಾರಿ ಪಿ.ಕೆ. ಶಶಿಕಲಾ, ಮಾಲೂರು ವಲಯದ ಅಬಕಾರಿ ನಿರೀಕ್ಷಕ ಜಿ. ಬಾಲಕೃಷ್ಣ, ಉಪ ನಿರೀಕ್ಷಕ ವಿ. ಗಜೇಂದ್ರ ಕುಮಾರ್, ಮುಖ್ಯ ಪೇದೆಗಳಾದ ವೀರೇಶ್, ಗಿರಿಜಾಪತಿ, ರಜನಿಕಾಂತ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.