ADVERTISEMENT

ವದಂತಿಗೆ ಕಿವಿಗೊಡದೆ ಲಸಿಕೆ ಹಾಕಿಸಿ: ಕೋಲಾರ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 15:25 IST
Last Updated 19 ಜನವರಿ 2020, 15:25 IST
ಕೋಲಾರದ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಭಾನುವಾರ ಆರಂಭವಾದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಸ್ತ್ರಚಿಕಿತ್ಸಾಕ ಡಾ.ಎಸ್.ಜಿ.ನಾರಾಯಣಸ್ವಾಮಿ ಚಾಲನೆ ನೀಡಿದರು.
ಕೋಲಾರದ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಭಾನುವಾರ ಆರಂಭವಾದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಶಸ್ತ್ರಚಿಕಿತ್ಸಾಕ ಡಾ.ಎಸ್.ಜಿ.ನಾರಾಯಣಸ್ವಾಮಿ ಚಾಲನೆ ನೀಡಿದರು.   

ಕೋಲಾರ: ‘ದೇಶದ ಭವಿಷ್ಯವಾಗಿರುವ ಮಕ್ಕಳ ಆರೋಗ್ಯ ಕಾಪಾಡುವ ಉದ್ದೇದಿಂದ ಲಸಿಕಾ ಅಭಿಯಾನ ನಡೆಸುತ್ತಿದ್ದು, ಪೋಷಕರು ತಪ್ಪದೆ 5 ವರ್ಷದೊಳಿಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು’ ಎಂದು ಶಸ್ತ್ರಚಿಕಿತ್ಸಾಕ ಡಾ.ಎಸ್.ಜಿ.ನಾರಾಯಣಸ್ವಾಮಿ ಸಲಹೆ ನೀಡಿದರು.

ಇಲ್ಲಿನ ಜಿಲ್ಲಾ ಎಸ್‌ಎನ್‌ಆರ್ ಸ್ಪತ್ರೆಯಲ್ಲಿ ಭಾನುವಾರ 2020ನೇ ಸಾಲಿನ ಮೊದಲನೇ ಸುತ್ತಿನ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ‘ಆರೋಗ್ಯ ಇಲಾಖೆಯಿಂದ ಲಸಿಕೆ ಅಭಿಯಾನದ ನಡೆಸಲಾಗುತ್ತಿದೆ ಎಂದರೆ ವದಂತಿಗಳನ್ನು ಹಬ್ಬಿಸುವವರು ಹೆಚ್ಚಾಗಿರುತ್ತಾರೆ’ ಇದಕ್ಕೆ ಯಾರು ಕಿವಿಗೋಡಬಾರದು’ ಎಂದರು.

‘ಗ್ರಾಮಗಳ ಶಾಲೆಗಳಲ್ಲಿ, ಬಸ್ ನಿಲ್ದಾಣ, ರೈಲು ನಿಲ್ದಾಣ, ಕೊಳಚೆ ಪ್ರದೇಶ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಪೋಲಿಯೊ ಅಭಿಯಾನ ನಡೆಸುತ್ತಿದ್ದು, ಸಾರ್ವಜನಿರು ಇದರ ಪ್ರಯೋಜನೆ ಪಡೆದುಕೊಳ್ಳಬೇಕು’ ಎಂದು ಕೋರಿದರು.

ADVERTISEMENT

ವೈದ್ಯರಾದ ಡಾ.ಆಶಾ, ಡಾ.ನಂದೀಶ್, ಡಾ.ಮಂಜುನಾಥ್, ರೋಟರಿ ಸಂಸ್ಥೆ ಅಧ್ಯಕ್ಷ ವೆಂಕಟರಮಣ, ಕಾರ್ಯದರ್ಶಿಗಳಾದ ಕೆ.ಎಸ್.ಸೋಮಶೇಖರ್, ಬಾಲಾಜಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.