ADVERTISEMENT

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 2:19 IST
Last Updated 2 ಅಕ್ಟೋಬರ್ 2020, 2:19 IST
ಹಾಥರಸ್‌ ಘಟನೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು
ಹಾಥರಸ್‌ ಘಟನೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು   

ಮುಳಬಾಗಿಲು: ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯಿಸಿ ರೈತಸಂಘದ ಉಪತಹಶೀಲ್ದಾರ್ ಸಂಪತ್ ಅವರಿಗೆ ರೈತ ಸಂಘದ ಸದಸ್ಯರು ಮನವಿ ಮಾಡಿದರು.

ರೈತ ಸಂಘದ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಮಹಿಳೆಯರಿಗೆ ರಕ್ಷಣೆ ಇಲ್ಲ. ಮಹಿಳೆಯರ ರಕ್ಷಣೆಗೆ ಅನೇಕ ಕಾನೂನು ಇದ್ದರೂ ದೌರ್ಜನ್ಯ ತಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಘಟನೆಗಳು ನಡೆದ ಕೂಡಲೇ ಆರೋಪಿಗಳನ್ನು ಬಂಧಿಸಿ, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಆಗ್ರಹಿಸಿದರು.

ತಾಲ್ಲೂಕು ಅಧ್ಯಕ್ಷ ಫಾರೂಕ್‌ಪಾಷ ಮಾತನಾಡಿದರು.

ADVERTISEMENT

ಉಪತಹಶೀಲ್ದಾರ್ ಸಂಪತ್ ಅವರು, ‘ಹಿರಿಯ ಅಧಿಕಾರಿಗಳ ಮೂಲಕ ಕೂಡಲೇ ತಮ್ಮ ಮನವಿಯನ್ನು ರಾಷ್ಟ್ರಪತಿಗೆ ಕಳುಹಿಸುತ್ತೇನೆ’ ಎಂದರು.

ಮನವಿ ನೀಡುವಾಗ ಈಕಂಬಳ್ಳಿ ಮಂಜುನಾಥ್, ವಿಜಯ್‌ಪಾಲ, ಸುಪ್ರೀಂಚಲ, ವಿಶ್ವನಾಥ್, ಪುತ್ತೇರಿ ರಾಜು, ಮನೋಜ್, ಕಾರ್ತಿಕ್‌, ಮಣಿ, ನವೀನ್, ವೇಣು, ಆದರ್ಶ್‌, ಸಿದ್ಧಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.