ADVERTISEMENT

ಉತ್ತಮ ಫಲಿತಾಂಶ: ಶಿಕ್ಷಕರಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2020, 16:10 IST
Last Updated 17 ಸೆಪ್ಟೆಂಬರ್ 2020, 16:10 IST
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದಲ್ಲಿ ಉತ್ತಮ ಫಲಿತಾಂಶ ಗಳಿಸಲು ಮಕ್ಕಳಿಗೆ ಪ್ರೇರಣೆ ನೀಡಿದ ಶಿಕ್ಷಕರನ್ನು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ಕೋಲಾರದಲ್ಲಿ ಬುಧವಾರ ಸನ್ಮಾನಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಮಾಜ ವಿಜ್ಞಾನ ವಿಷಯದಲ್ಲಿ ಉತ್ತಮ ಫಲಿತಾಂಶ ಗಳಿಸಲು ಮಕ್ಕಳಿಗೆ ಪ್ರೇರಣೆ ನೀಡಿದ ಶಿಕ್ಷಕರನ್ನು ಡಿಡಿಪಿಐ ಕೆ.ಎಂ.ಜಯರಾಮರೆಡ್ಡಿ ಕೋಲಾರದಲ್ಲಿ ಬುಧವಾರ ಸನ್ಮಾನಿಸಿದರು.   

ಕೋಲಾರ: ಎಸ್ಸೆಸ್ಸೆಲ್ಸಿ ಸಮಾಜ ವಿಜ್ಞಾನ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿ ಸಾಧನೆ ಮಾಡಲು ಮಕ್ಕಳಿಗೆ ಪ್ರೇರಣೆ ನೀಡಿದ ಶಿಕ್ಷಕರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ ನಗರದಲ್ಲಿ ಬುಧವಾರ ಸನ್ಮಾನಿಸಿದರು.

‘ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಉತ್ತಮ ಸ್ಥಾನದಲ್ಲಿದೆ. ಇದರ ಹಿಂದೆ ಇಲಾಖೆಯ ಜತೆಗೆ ಎಲ್ಲಾ ಶಿಕ್ಷಕರು, ಮುಖ್ಯಶಿಕ್ಷಕರ ಪರಿಶ್ರಮವಿದೆ. ಪ್ರೌಢ ಶಾಲಾ ಶಿಕ್ಷಕರು ಹೆಚ್ಚಿನ ಮುತುವರ್ಜಿಯಿಂದ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನದಿಂದಲೂ 19 ಶಾಲೆಗಳು ಹೆಚ್ಚುವರಿಯಾಗಿ ಶೇ 100ರ ಫಲಿತಾಂಶ ಸಾಧನೆ ಗೌರವಕ್ಕೆ ಪಾತ್ರವಾಗಿವೆ. ಈ ಪೈಕಿ 10 ಸರ್ಕಾರಿ ಶಾಲೆಗಳು ಸೇರಿರುವುದು ಸಂತಸದ ವಿಷಯ’ ಎಂದು ಹೇಳಿದರು.

ADVERTISEMENT

‘ಕೋವಿಡ್–19 ಸಂಕಷ್ಟದ ಪರಿಸ್ಥಿತಿಯಲ್ಲೂ ಶಿಕ್ಷಕರು ವಿದ್ಯಾಗಮ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದ್ದೀರಿ. ಫಲಿತಾಂಶ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಸವಾಲು ಎದುರಿಸಬೇಕಾಗಿದ್ದು, ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯ ಮುರಳಿಮೋಹನ್, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.