ADVERTISEMENT

ವಾಲಿಬಾಲ್: ಗೋಪೇನಹಳ್ಳಿ ಶಾಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 7:09 IST
Last Updated 16 ಅಕ್ಟೋಬರ್ 2025, 7:09 IST
ಕೆಜಿಎಫ್ ತಾಲ್ಲೂಕಿನ ಗೋಪೇನಹಳ್ಳಿ ಶಾಲೆ ವಿದ್ಯಾರ್ಥಿನಿಯರು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗೀಯ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು
ಕೆಜಿಎಫ್ ತಾಲ್ಲೂಕಿನ ಗೋಪೇನಹಳ್ಳಿ ಶಾಲೆ ವಿದ್ಯಾರ್ಥಿನಿಯರು ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗೀಯ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದರು   

ಬೇತಮಂಗಲ: 2025–26ನೇ ಸಾಲಿನ 14 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದಲ್ಲಿ ಗೋಪೇನಹಳ್ಳಿ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟದಲ್ಲಿ ವಿಜೇತರಾಗಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಮೂಲಕ ಮೂಲಕ ಜಿಲ್ಲೆ ಹಾಗೂ ಕೆಜಿಎಫ್ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

ಕೆಜಿಎಫ್ ತಾಲ್ಲೂಕಿನ ವೆಂಗಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಪೇನಹಳ್ಳಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲ್ಲೂಕು, ಜಿಲ್ಲಾ ಮಟ್ಟ ಹಾಗೂ ವಿಭಾಗೀಯ ಮಟ್ಟದಲ್ಲಿ ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. 

ಇತ್ತೀಚೆಗೆ ದೇವನಹಳ್ಳಿಯಲ್ಲಿ ನಡೆದ ವಿಭಾಗೀಯ ಮಟ್ಟದ ಕ್ರೀಡಾಕೂಟದಲ್ಲಿ ಕೋಲಾರ ಜಿಲ್ಲೆಯನ್ನು ಪ್ರತಿನಿಧಿಸಿ, ಉತ್ತಮ ಪ್ರದರ್ಶನ ನೀಡುವ ಮೂಲಕ ವಿದ್ಯಾರ್ಥಿನಿಯರಾದ ಶ್ವೇತಾ ಮತ್ತು ಸಂಜನಾ ಪ್ರಿಯಾ ಈ ಸಾಧನೆ ಮಾಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.