ADVERTISEMENT

ಕೋಲಾರ ಗುತ್ತಿಗೆದಾರರಿಗೆ ₹180 ಕೋಟಿ ಬಾಕಿ

ಎರಡು ವರ್ಷಗಳಿಂದ ಪಾವತಿಯಾಗದ ಬಿಲ್‌

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 20:30 IST
Last Updated 24 ಆಗಸ್ಟ್ 2022, 20:30 IST

ಕೋಲಾರ: ಜಿಲ್ಲೆಯಾದ್ಯಂತ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಸರ್ಕಾರ 2 ವರ್ಷಗಳಿಂದ ಬಾಕಿ ಉಳಿಸಿಕೊಂಡಿ
ರುವ ಬಿಲ್‌ ಮೊತ್ತ ₹180 ಕೋಟಿ.

ಲೋಕೋಪಯೋಗಿ ಇಲಾಖೆಯಲ್ಲಿ ₹82 ಕೋಟಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ನಡೆದಿರುವ ಕಾಮಗಾರಿಗೆ ಸಂಬಂಧಿಸಿ ₹38 ಕೋಟಿ ಬಿಲ್‌ ಇನ್ನೂ ಪಾವತಿಯಾಗಿಲ್ಲ. ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ಕಾಮಗಾರಿ ನಡೆದಿದ್ದು, ಸರ್ಕಾರದಿಂದ ಗುತ್ತಿಗೆದಾರರಿಗೆ ಇನ್ನೂ ಹಣ ಬಿಡುಗಡೆಯಾಗಿಲ್ಲ.

ಜಿಲ್ಲಾ ಗುತ್ತಿಗೆದಾರ ಸಂಘದ ಅಧ್ಯಕ್ಷ ವಿ.ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಸಂಘದವರು ಹಲವು ಬಾರಿ ಜಿಲ್ಲಾಧಿಕಾರಿಗೆ ಮನವಿ ನೀಡಿದ್ದಾರೆ, ಪ್ರತಿಭಟನೆ ಕೂಡ ನಡೆಸಿದ್ದಾರೆ.

ADVERTISEMENT

‘ಬಾಕಿ ಬಿಲ್‌ ಪಾವತಿ ಸಂಬಂಧ ಆ.25ರಂದು (ಗುರುವಾರ) ಸಭೆ ನಡೆಸಿ ಚರ್ಚಿಸುವುದಾಗಿ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಭರವಸೆ ನೀಡಿದ್ದಾರೆ. ಆಕಸ್ಮಾತ್‌ ಹಣ ಪಾವತಿಯ ಭರವಸೆ ಸಿಗದಿದ್ದರೆ ಕಾಮಗಾರಿ
ಕೈಗೆತ್ತಿಕೊಳ್ಳದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ’ ಎಂದು ಸಂಘದ ಉಪಾಧ್ಯಕ್ಷ ಬಿ.ಎಂ.ವೆಂಕಟರಮಣಗೌಡ ತಿಳಿಸಿದ್ದಾರೆ.

ಹಣ ಬಿಡುಗಡೆಗೆ ಯಾರಿಂದಲಾದರೂ ಕಮಿಷನ್‌ ಬೇಡಿಕೆ ಬಂದಿದೆಯೇ ಎಂಬ ಪ್ರಶ್ನೆಗೆ, ‘ಸರ್ಕಾರ ಇನ್ನೂ ಹಣವನ್ನೇ ಬಿಡುಗಡೆ ಮಾಡಿಲ್ಲ. ಕಮಿಷನ್‌ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.