ಮಾಲೂರು: ಗ್ರಾಮೀಣ ಮಹಿಳೆಯರ ಸಬೀಲಿಕರಣಕ್ಕಾಗಿ ಸರ್ಕಾರದಿಂದ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.
ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅರ್ಹ ಮಹಿಳೆಯರಿಗೆ ಕುಕ್ಕುಟ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರ ಗ್ರಾಮೀಣ ಭಾಗದ ಮಹಿಳೆಯರ ಅಭಿವೃದ್ಧಿಗೆ ಹಲವು ಯೊಜನೆಗಳನ್ನು ಜಾರಿಗೆ ತರಲಾಗಿದೆ. ಇದರಲ್ಲಿ ನಾಟಿ ಕೋಳಿ ಮರಿಗಳನ್ನು ಸಹ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ ಮಹಿಳೆಯರು 8, ಪರಿಶಿಷ್ಟ ಪಂಗಡ 40, ಸಾಮಾನ್ಯ 7 ಮಂದಿ ಮಹಿಳೆಯರಿಗೆ ತಲಾ 20 ಕೋಳಿ ಮರಿಗಳನ್ನು ವಿತರಣೆ ಮಾಡಲಾಗಿದೆ. ರೈತ ಮಹಿಳೆಯರು ಮರಿಗಳನ್ನು ಸಾಕಾಣಿಕೆ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು.
ದರ್ಖಾಸ್ಸು ಸಮಿತಿ ಅಧ್ಯಕ್ಷ ಹನುಮಂತಪ್ಪ, ಮುಖಂಡರಾದ ಅಂಜಿನಿ ಸೋಮಣ್ಣ, ಮುರಳೀಧರ್, ಹನುಮಂತರೆಡ್ಡಿ, ನಾಗರಾಜರೆಡ್ಡಿ, ಮುಖ್ಯ ಪಶು ವೈದ್ಯಾಧಿಕಾರಿ ಪದ್ಮಜ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.