ADVERTISEMENT

ತೊಟ್ಲಿ ಗ್ರಾ.ಪಂ: ಮಂಜುನಾಥ್‌, ಅನಿತಾ ಆಯ್ಕೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2023, 16:17 IST
Last Updated 9 ಆಗಸ್ಟ್ 2023, 16:17 IST
ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್‌.ಮಂಜುನಾಥ್‌ ಹಾಗೂ ಎನ್‌.ಅನಿತಾ ಅವರು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹಾಗೂ ಸದಸ್ಯರೊಂದಿಗೆ ಸಂಭ್ರಮಿಸಿದರು
ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್‌.ಮಂಜುನಾಥ್‌ ಹಾಗೂ ಎನ್‌.ಅನಿತಾ ಅವರು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹಾಗೂ ಸದಸ್ಯರೊಂದಿಗೆ ಸಂಭ್ರಮಿಸಿದರು   

ಕೋಲಾರ: ತಾಲ್ಲೂಕಿನ ತೊಟ್ಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಸ್‌.ಮಂಜುನಾಥ್‌ ಹಾಗೂ ಉಪಾಧ್ಯಕ್ಷರಾಗಿ ಎನ್‌.ಅನಿತಾ ಆಯ್ಕೆಯಾಗಿದ್ದಾರೆ.

ಒಟ್ಟು 16 ಸದಸ್ಯರ ಪಂಚಾಯಿತಿ ಇದಾಗಿದೆ. ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್‌ ಬೆಂಬಲಿತ ಮಂಜುನಾಥ್‌ ಅವರಿಗೆ 9 ಮತಗಳ ಬಿದ್ದವು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್‌ ಬೆಂಬಲಿತ ಅನಿತಾ ಅವರಿಗೆ 8 ಮತಗಳು ಲಭಿಸಿದವು. ಕಾಂಗ್ರೆಸ್‌ ಬೆಂಬಲಿತರಾಗಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವಿ.ನವೀನ್‌ ಕುಮಾರ್‌ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನರಸಮ್ಮ ಅವರಿಗೆ ತಲಾ 6 ಮತಗಳು ಬಿದ್ದವು. ಅಧ್ಯಕ್ಷ ಸ್ಥಾನಕ್ಕೆ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಪ್ರಿಯಾಂಕಾ ಅವರಿಗೆ 1 ಮತ ಬಿತ್ತು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪರಮೇಶ್ವರ್‌ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಜಲಘಟ್ಟ ಪಂಚಾಯಿತಿ ಪಿಡಿಒ ರವೀಂದ್ರ ಪ್ರಭಾರ ಪಿಡಿಒ ಆಗಿ ಹಾಗೂ ಉರಿಗಿಲಿ ಪಂಚಾಯಿತಿಯ ಕಾರ್ಯದರ್ಶಿ ನಾರಾಯಣಸ್ವಾಮಿ ಪ್ರಭಾರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದರು. ಏಳು ವರ್ಷಗಳಿಂದ ಈ ಗ್ರಾಮ ಪಂಚಾಯಿತಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ತೆಕ್ಕೆಯಲ್ಲಿತ್ತು.

ADVERTISEMENT

ಶ್ರೀನಿವಾಸಪುರ ಕ್ಷೇತ್ರದ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಇದ್ದರು. ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.