ADVERTISEMENT

ಕೋಲಾರ: ಗ್ರಾ.ಪಂ ಅಧ್ಯಕ್ಷೆ ಆತ್ಮಹತ್ಯೆ ಯತ್ನ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 16:15 IST
Last Updated 6 ಆಗಸ್ಟ್ 2021, 16:15 IST
ಆತ್ಮಹತ್ಯೆಗೆ ಯತ್ನಿಸಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ
ಆತ್ಮಹತ್ಯೆಗೆ ಯತ್ನಿಸಿ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿರುವ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ   

ಕೋಲಾರ: ತಾಲ್ಲೂಕಿನ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಅವರು ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಅವರನ್ನು ಕುಟುಂಬ ಸದಸ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುಷ್ಮಾ ಅವರ ದೇಹಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗೇಶ್ ಹಾಗೂ ಸದಸ್ಯ ವಿಜಯ್‌ಕುಮಾರ್ ಅವರ ಕಿರುಕುಳದಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಪುಷ್ಪಾ ಅವರು ಆತ್ಮಹತ್ಯೆಗೆ ಯತ್ನಿಸುವುದಕ್ಕೂ ಮುನ್ನ ಪತ್ರ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ADVERTISEMENT

ನಾಗೇಶ್ ಮತ್ತು ವಿಜಯ್‌ಕುಮಾರ್ ವಿರುದ್ಧ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.