ADVERTISEMENT

ಗ್ರಾ.ಪಂ ಅಧ್ಯಕ್ಷ– ಉಪಾಧ್ಯಕ್ಷಗಾದಿ ಮೀಸಲಾತಿ ನಿಗದಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 14:34 IST
Last Updated 23 ಜನವರಿ 2021, 14:34 IST
ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೋಲಾರದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಿದರು.
ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೋಲಾರದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಿದರು.   

ಕೋಲಾರ: ತಾಲ್ಲೂಕಿನ 34 ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷಗಾದಿಗೆ ಇಲ್ಲಿ ಶನಿವಾರ ಮೀಸಲಾತಿ ನಿಗದಿಪಡಿಸಲಾಯಿತು.

ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಧ್ಯಕ್ಷತೆಯಲ್ಲಿ ಗ್ರಾ.ಪಂ ನೂತನ ಸದಸ್ಯರ ಸಮ್ಮುಖದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಸಲಾಯಿತು. ಒಟ್ಟಾರೆ 17 ಗ್ರಾ.ಪಂಗಳಲ್ಲಿ ಅಧ್ಯಕ್ಷ ಸ್ಥಾನವನ್ನು ಮಹಿಳೆಯರು ಅಲಂಕರಿಸುವುದು ಖಚಿತವಾಯಿತು.

ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್‌ ಶೋಭಿತಾ, ಚುನಾವಣಾ ಶಾಖೆ ತಹಶೀಲ್ದಾರ್ ನಾಗವೇಣಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.