ಕೋಲಾರ: ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಭೌತಿಕ ತರಗತಿಗಳು ಜುಲೈ 26ರಿಂದ ಪ್ರಾರಂಭವಾಗಲಿದ್ದು, ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರವನ್ನು ಕಾಲೇಜಿಗೆ ಹಾಜರುಪಡಿಸಬೇಕು ಎಂದು ಸೂಚಿಸಲಾಗಿದೆ.
ಲಸಿಕೆ ಪಡೆಯದೆ ಇರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಕಾಲೇಜಿಗೆ ಹಾಜರಾಗಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.