ಶ್ರೀನಿವಾಸಪುರ: ತಾಲ್ಲೂಕಿನ 6 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಗುರುವಾರ ನಡೆದ ಚುನಾವಣೆಯಲ್ಲಿ 4 ಪಂಚಾಯಿತಿಗಳು ಕಾಂಗ್ರೆಸ್ ಹಾಗೂ 2 ಪಂಚಾಯಿತಿಗಳು ಜೆಡಿಎಸ್
ಪಾಲಾಗಿವೆ.
ಆರಿಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ವೆಂಕಟರೆಡ್ಡಿ ಆಯ್ಕೆಯಾಗಿದ್ದಾರೆ. ದಳಸನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸರಸ್ವತಮ್ಮ ಮತ್ತು ಉಪಾಧ್ಯಕ್ಷರಾಗಿ ವಿ. ಜಗದೀಶ್ ಆಯ್ಕೆಯಾಗಿದ್ದಾರೆ. ಕೊಳತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕವಿತಾ ಮತ್ತು ಉಪಾಧ್ಯಕ್ಷರಾಗಿ ವರಲಕ್ಷ್ಮಿ ಆಯ್ಕೆಯಾಗಿದ್ದಾರೆ.
ಪುಲಗೂರುಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲಲಿತಾ ಮತ್ತು ಉಪಾಧ್ಯಕ್ಷರಾಗಿ ಕೆ.ವಿ. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
ರಾಯಲ್ಪಾಡ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅರುಣಮ್ಮ ಮತ್ತು ಉಪಾಧ್ಯಕ್ಷರಾಗಿ ಪಾರ್ವತಮ್ಮ ಆಯ್ಕೆಯಾಗಿದ್ದಾರೆ.
ಯಲ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಲ್. ಶಶಿಕಲಾ ಮತ್ತು ಉಪಾಧ್ಯಕ್ಷರಾಗಿ ಜೆ.ವಿ. ರೂಪಾ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.