ADVERTISEMENT

ಬೇತಮಂಗಲ: ಅದ್ದೂರಿ ಗಣೇಶ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 6:30 IST
Last Updated 2 ಸೆಪ್ಟೆಂಬರ್ 2025, 6:30 IST
ಬೇತಮಂಗಲದ ಹೊಸ ಬಡಾವಣೆಯ ಶ್ರೀ ವಿಕ್ರಮ ರೈತ ಯುವಕರ ಕ್ಷೇಮಾಭಿವೃದ್ಧಿ ಸಂಘ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ
ಬೇತಮಂಗಲದ ಹೊಸ ಬಡಾವಣೆಯ ಶ್ರೀ ವಿಕ್ರಮ ರೈತ ಯುವಕರ ಕ್ಷೇಮಾಭಿವೃದ್ಧಿ ಸಂಘ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ   

ಬೇತಮಂಗಲ: ಇಲ್ಲಿನ ಹೊಸ ಬಡಾವಣೆಯ ವಿಕ್ರಮ ರೈತ ಯುವಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನೆ ಭಾನುವಾರ ಅದ್ದೂರಿಯಾಗಿ ನೆರವೇರಿತು.

ಗಣೇಶ ಹಬ್ಬದ ಅಂಗವಾಗಿ ಐದು ದಿನಗಳ ಕಾಲ ವಿವಿಧ ಪೂಜಾ ಕಾರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ತಮೆಟೆ, ಬ್ಯಾಂಡ್ ಸೆಟ್, ಗಾಡಿ ಗೊಂಬೆ ಹಾಗೂ ವಿವಿಧ ವಾದ್ಯಗಳು ಮೆರವಣಿಗೆಗೆ ಮೆರಗು ನೀಡಿದವು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.