ಕೋಲಾರ: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಈಚೆಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಶಾಸಕ ಕೊತ್ತೂರು ಮಂಜುನಾಥ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ನೀಡಿ ಧನ್ಯವಾದ ಅರ್ಪಿಸಿದರು.
ಮುಂಬರುವ ದಿನಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕೆಂದು ಬೇಡಿಕೆ ಮುಂದಿಟ್ಟರು.
ಸಂಪುಟ ಸಭೆಯಲ್ಲಿ ನಗರದ ಬಾಲಕರ ಸರ್ಕಾರಿ ಕಾಲೇಜಿಗೆ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ₹ 40 ಕೋಟಿ, ಬಾಲಕಿಯರ ಸರ್ಕಾರಿ ಕಾಲೇಜಿನಲ್ಲಿ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ₹ 20 ಕೋಟಿ, ಅಂತರಗಂಗೆ ಬೆಟ್ಟದಿಂದ ಕೋಲಾರಮ್ಮ ಕೆರೆಗೆ ಕಾಲುವೆ ಅಭಿವೃದ್ಧಿಗೆ ₹ 90 ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಾಂಧಿ ಭವನ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಇಲಾಖೆಯಿಂದ ಭೂಮಿ, ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿ ನಿಲಯದ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಇಲಾಖೆಯಿಂದ ಭೂಮಿ ಸೇರಿದಂತೆ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ₹ 150 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.