ಕೋಲಾರ: ‘ಯಾರೋ ಒಬ್ಬ ಸಾಮಾನ್ಯ ಪ್ರಜೆ ನೀಡಿದ ದೂರನ್ನು ಪರಿಗಣಿಸಿ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸುತ್ತೇನೆ’ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಟಿ.ಜೆ.ಅಬ್ರಹಾಂ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ದಂಡ ವಿಧಿಸಿದೆ. ಆಕಸ್ಮಾತ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ಯವಹಾರ ನಡೆಸಿದ್ದರೆ ಯಾವುದಾದರೂ ತನಿಖೆ ಸಂಸ್ಥೆಗೆ ಕೊಡಬೇಕಿತ್ತು. ಅವರು ಕೊಡುವ ವರದಿ ಆಧರಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬಹುದಾಗಿತ್ತು. ಆದರೆ, ಈಗ ರಾಜಕೀಯ ದುರುದ್ದೇಶದಿಂದ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಆರೋಪಿಸಿದರು.
‘ಮುಂದೆ ಕಾನೂನು ಹೋರಾಟ ನಡೆಸುತ್ತೇವೆ. ಈ ವರೆಗೆ ಸಿದ್ದರಾಮಯ್ಯ ಮೇಲೆ ಒಂದು ಕಪ್ಪುಚುಕ್ಕೆಯೂ ಇಲ್ಲ. ಅವರು ಯಾವುದೇ ಕಾರಣಕ್ಕೆ ರಾಜೀನಾಮೆ ನೀಡಬಾರದು. ಅವರು ಯಾವುದೇ ತಪ್ಪು ಮಾಡಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.