ಮಾಸ್ತಿ ಎಂದಾಕ್ಷಣ ನಮ್ಮ ಕಣ್ಮುಂದೆ ಬರೋದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರು. ಈಗ, ಈ ಮಾಸ್ತಿಯು ಸರ್ಕಾರಿ ಶಾಲೆಯ ಕಾರಣದಿಂದಲೂ ಗಮನ ಸೆಳೆಯುತ್ತಿದೆ. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಖಾಸಗಿ ಶಾಲೆಗಳನ್ನು ಮೀರಿಸುವಂತೆ ತಲೆ ಎತ್ತಿ ನಿಂತಿದೆ ಕರ್ನಾಟಕ ಪಬ್ಲಿಕ್ ಸ್ಕೂಲ್. ಗುಜರಾತಿನಲ್ಲಿ ಜನಿಸಿ, ಮೈಸೂರಿನಲ್ಲಿ ಓದಿ, ಅಮೆರಿಕದಲ್ಲಿ ನೆಲೆಸಿರುವ ಜನಾರ್ದನ್ ಠಕ್ಕರ್ ಎಂಬುವರು ‘ಠಕ್ಕರ್ ಕುಟುಂಬ ಪ್ರತಿಷ್ಠಾನ’ದ ಮೂಲಕ ಈ ಶಾಲೆಯನ್ನು ಅಭಿವೃದ್ಧಿ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.