ಕೋಲಾರ: ನಗರದ ಹಾರೋಹಳ್ಳಿಯಲ್ಲಿ ಸ್ಮಶಾನಕ್ಕೆ ತೆರಳುವ ರಸ್ತೆಗೆ ಜಲ್ಲಿ ಹಾಕಿ ಹಾಗೆಯೇ ಬಿಟ್ಟಿದ್ದು, ಶವ ಸಾಗಿಸುವಾಗ ತೊಂದರೆಯಾಗುತ್ತಿದೆ ಎಂದು ನಾಗರಿಕರು ಸಮಸ್ಯೆ ಹೇಳಿಕೊಂಡಿದ್ದಾರೆ.
ನಗರಸಭೆಯಿಂದ ಎರಡು ವರ್ಷಗಳ ಹಿಂದೆ ಡಾಂಬರು ರಸ್ತೆ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಗುತ್ತಿಗೆದಾರರು ಕೇವಲ ಜಲ್ಲಿ ಹಾಕಿ ಹಾಗೆಯೇ ಬಿಟ್ಟಿದ್ದಾರೆ. ಜಲ್ಲಿ ಕಲ್ಲುಗಳು ಹರಡಿಕೊಂಡಿದ್ದು, ರಸ್ತೆಯಲ್ಲಿ ನಡೆದಾಡಲು ಸಾಧ್ಯವಾಗುತ್ತಿಲ್ಲವೆಂದು ದೂರಿದ್ದಾರೆ. ಕೂಡಲೇ ಈ ರಸ್ತೆಗೆ ಡಾಂಬರು ಹಾಕಿಸಬೇಕೆಂದು ಗ್ರಾಮದ ಮುಖಂಡ ಶ್ರೀನಿವಾಸ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.