ADVERTISEMENT

ಆರೋಗ್ಯ ನಿರೀಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 13:52 IST
Last Updated 6 ಏಪ್ರಿಲ್ 2020, 13:52 IST
ಶರವಣ
ಶರವಣ   

ನಂಗಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಮೀಪದ ಗಡಿ ಭಾಗದ ಹೆಬ್ಬಣಿ ಚೆಕ್‌ಪೋಸ್ಟ್‌ನಲ್ಲಿ ತೆರೆದಿರುವ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಗ್ಯ ನಿರೀಕ್ಷಕ ಶರವಣ (42) ಅವರು ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆಯಲ್ಲಿದ್ದ ಅವರನ್ನು ಕೆಲ ದಿನಗಳಿಂದ ಚೆಕ್‌ಪೋಸ್ಟ್‌ನ ಆರೋಗ್ಯ ಕೇಂದ್ರಕ್ಕೆ ನಿಯೋಜಿಸಲಾಗಿತ್ತು. ರಾತ್ರಿ ಕರ್ತವ್ಯ ನಿರ್ವಹಣೆ ವೇಳೆ ಎದೆ ನೋವಿನಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಶರವಣ ಅವರು ಮುಳಬಾಗಿಲು ನಗರದ ವಿಠಲೇಶ್ವರಪಾಳ್ಯದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಮುಳಬಾಗಿಲು ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ಶರವಣ ಅವರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಬಳಿಕ ಮಧ್ಯಾಹ್ನ ಮೃತರ ಅಂತ್ಯಕ್ರಿಯೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.