
ಕೆಜಿಎಫ್: ಕಡ್ಡಾಯವಾಗಿ ಹೆಲ್ಮೆಟ್ ಬಳಸದ ದ್ವಿಚಕ್ರ ವಾಹನ ಸವಾರರ ಮೇಲೆ ಪೊಲೀಸರು ಕೆಜಿಎಫ್ ಪೊಲೀಸ್ ಜಿಲ್ಲೆಯಾದ್ಯಂತ ಸೋಮವಾರದಿಂದ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.
ಜಿಲ್ಲೆಯ ಎಂಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ 241 ಪ್ರಕರಣಗಳಲ್ಲಿ ₹1.21 ಲಕ್ಷ ದಂಡ ಸಂಗ್ರಹಿಸಿದ್ದಾರೆ.
ಒಂದು ವಾರದಿಂದ ಕಡ್ಡಾಯ ಹೆಲ್ಮೆಟ್ ಕುರಿತು ಪೊಲೀಸರು ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಡಿ.8ರಿಂದ ಹೆಲ್ಮೆಟ್ ಧರಿಸದೆ ಇದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೊದಲ ಹಂತದಲ್ಲಿ ₹500 ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆ ಎಂಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಡ ವಿಧಿಸಿದ್ದಾರೆ.
ಬಹಳಷ್ಟು ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ತಿಳಿಯದ ಕಾರಣ, ಮುಖ್ಯ ರಸ್ತೆಗಳಲ್ಲಿ ಕಾದು ಕುಳಿತಿದ್ದ ಪೊಲೀಸರ ಕೈಗೆ ಸಿಕ್ಕಿ ಬಿದ್ದರು. ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ತಿಳಿದಿಲ್ಲ. ಇನ್ನೊಮ್ಮೆ ಹೆಲ್ಮೆಟ್ ಧರಿಸಿಯೇ ಬರುತ್ತೇನೆ ಎಂದು ಗೋಗೆರೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.