ADVERTISEMENT

‘ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಹಿಂದಿ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 21 ಜುಲೈ 2023, 6:09 IST
Last Updated 21 ಜುಲೈ 2023, 6:09 IST
ಕೋಲಾರ ಜಿಲ್ಲಾ ಪ್ರೌಢಶಾಲೆಗಳ ಹಿಂದಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ 10 ದಿನಗಳ ಕಾರ್ಯಾಗಾರದ ಸಮಾರೋಪದಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಡಿಡಿಪಿಐ ಕೃಷ್ಣಮೂರ್ತಿ ಸನ್ಮಾನಿಸಿದರು
ಕೋಲಾರ ಜಿಲ್ಲಾ ಪ್ರೌಢಶಾಲೆಗಳ ಹಿಂದಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ 10 ದಿನಗಳ ಕಾರ್ಯಾಗಾರದ ಸಮಾರೋಪದಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಡಿಡಿಪಿಐ ಕೃಷ್ಣಮೂರ್ತಿ ಸನ್ಮಾನಿಸಿದರು    

ಕೋಲಾರ: ‘ಮಾತೃಭಾಷೆ ಜತೆಗೆ ಹಿಂದಿ ಕಲಿಸುವುದರಿಂದ ಕೇಂದ್ರ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹಕಾರಿಯಾಗಲಿದೆ. ಮಕ್ಕಳು ಇಷ್ಟಪಟ್ಟು ಕಲಿಯುವ ವಾತಾವರಣವನ್ನು ಶಿಕ್ಷಕರು ಶಾಲೆಗಳಲ್ಲಿ ಸೃಷ್ಟಿಸಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಕರೆ ನೀಡಿದರು.

ನಗರದ ಗುರು ಭವನದಲ್ಲಿ ಜಿಲ್ಲೆಯ ಹಿಂದಿ ಶಿಕ್ಷಕರಿಗೆ ಹಮ್ಮಿಕೊಂಡಿರುವ ಹತ್ತು ದಿನಗಳ ಪುನಶ್ಚೇತನ ಕಾರ್ಯಗಾರದ ಸಮಾರೋಪದಲ್ಲಿ ಅವರು ಮಾತನಾಡಿದರು.

‘ಮಾತೃಭಾಷೆ ಕನ್ನಡದೊಂದಿಗೆ ಹಿಂದಿ, ಇಂಗ್ಲಿಷ್‌ ಕಲಿಕೆ ಅಗತ್ಯವಾಗಿದೆ. 10 ದಿನಗಳ ಕಾರ್ಯಾಗಾರದಲ್ಲಿ ಬೋಧನಾ ಗುಣಮಟ್ಟ ಉತ್ತಮಗೊಂಡಿದ್ದು, ಅದನ್ನು ಶಾಲೆಗಳಲ್ಲಿ ಪ್ರಯೋಗಿಸಿ, ತರಬೇತಿಯಲ್ಲಿ ಕಲಿತಿದ್ದನ್ನು ಮಕ್ಕಳಿಗೆ ಧಾರೆಯೆರೆಯಿರಿ’ ಎಂದು ಕಿವಿಮಾತು ಹೇಳಿದರು.

ADVERTISEMENT

ಜಿಲ್ಲಾ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಹಿಂದಿ ಸಂಸ್ಥೆಯ ನಿರ್ದೇಶಕ ಪರಮಾನಂದ, ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಯೋಗೇಂದ್ರನಾಥ್ ಮಿಶ್ರ, ಶಿವದತ್‍ ಅವರನ್ನು ಜಿಲ್ಲಾ ಹಿಂದಿ ಶಿಕ್ಷಕರ ಸಂಘದಿಂದ ಸನ್ಮಾನಿಸಲಾಯಿತು.

ಕನ್ನಡ ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಂಕರೇಗೌಡ, ಜಿಲ್ಲಾ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಖಜಾಂಚಿ ವೇಣುಗೋಪಾಲ್, ಮುಳಬಾಗಿಲು ತಾಲ್ಲೂಕು ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಬಂಗಾರಪೇಟೆಯ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಾಥ್, ಮಾಲೂರು ತಾಲ್ಲೂಕಿನ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷೆ ಮಮತ, ಶಿಕ್ಷಕರಾದ ಮಂಜುನಾಥ್, ಶ್ರೀನಾಥ್, ಗಂಗಾಧರ್, ಜಮೀರ್ ಪಾಷ, ರತ್ನಮ್ಮ, ಲಾವಣ್ಯ ಸಿಂಗ್ , ರಘು, ಪ್ರಭಾ, ಜ್ಯೋತಿ, ಸೋಮಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.