
ಶ್ರೀನಿವಾಸಪುರ: ತಾಲ್ಲೂಕಿನ ರೋಣುರು ಗ್ರಾಮದ ಶ್ರೀಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಭಾನುವಾರ ಹಿಂದೂ ಸಮಾಜೋತ್ಸವ ಸಮಿತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಪ್ರಮುಖ ಉಪನ್ಯಾಸಕಿ ನಿಶಾ ಯೋಗೇಶ್ವರ್ ಉದ್ಘಾಟಿಸಿ ಮಾತನಾಡಿದರು.
‘ಸೃಷ್ಟಿಯು ಎಲ್ಲಾ ಜಾತಿ, ಧರ್ಮಗಳಿಗೂ ಒಂದೇ ರೀತಿಯಾಗಿ ನಡೆದುಕೊಳ್ಳುತ್ತದೆ. ಆದರೆ, ಮೇಲು, ಕೀಳು ಭಾವನೆಯೊಂದಿಗೆ ನಡೆದುಕೊಳ್ಳುವುದು ತಪ್ಪು, ಅದನ್ನ ಬಿಟ್ಟು ನಾವೆಲ್ಲೂರು ಹಿಂದುಗಳೆಂಬ ಭಾವನೆಯೊಂದಿಗೆ ಇದ್ದರೆ ದೇಶವು ಸುಭದ್ರವಾಗಿರುಲು ಸಾಧ್ಯ’ ಎಂದರು.
ಬಿಜೆಪಿಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್ ಮಾತನಾಡಿ, ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು.
ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಎಂಎಲ್‍ಸಿ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲರೆಡ್ಡಿ , ಮುಖಂಡರಾದ ನೀಲಟೂರು ಚಿನ್ನಪ್ಪರೆಡ್ಡಿ , ಮುನಿಶಾಗುರುಜಿ, ತಪಸ್ವಿಗುರುಜಿ, ಆರ್‍ಪಿಐ ಆನಂದಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.