ADVERTISEMENT

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 15 ಮೇ 2025, 15:11 IST
Last Updated 15 ಮೇ 2025, 15:11 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಜ ಸೇವೆಗಾಗಿ ಕೋಲಾರದ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.

ನಗರ ಹೊರವಲಯದ ಟಮಕದಲ್ಲಿರುವ ಆರ್.ಎಲ್.ಜಾಲಪ್ಪ ರಜತ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ನಡೆದ ಸಂಸ್ಥೆಯ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಂಸ್ಥೆಯ ಕುಲಾಧಿಪತಿ ಜಿ.ಎಚ್.ನಾಗರಾಜ್ ಈ ಘೋಷಣೆ ಮಾಡಿದರು.

'ಸಂಸ್ಥೆಯ ಕಾರ್ಯಕಾರಿ ಮತ್ತು ಶೈಕ್ಷಣಿಕ ಮಂಡಳಿಯು ಒಮ್ಮತದಿಂದ ಈ ತೀರ್ಮಾನ ಕೈಗೊಂಡಿದೆ. ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿ 16 ಬಾರಿ‌ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ಸಮುದಾಯಗಳಿಗೆ ಐದು ಗ್ಯಾರಂಟಿ ಯೋಜನೆ ಜಾರಿ‌ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ‌. ಯಾವುದೇ ಸರ್ಕಾರದಿಂದ ಇಂಥ ಕೆಲಸ ಆಗಿರಲಿಲ್ಲ. ಅವರಿಗೆ ಬಹಳ ಹಿಂದೆಯೇ ಈ ಗೌರವ ಸಲ್ಲಿಸಬೇಕಿತ್ತು. ಈಗ ನಿರ್ಧಾರ ಕೈಗೊಂಡಿದ್ದು, ಇನ್ನೂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿಲ್ಲ. ವಿಚಾರ ತಿಳಿಸಿ ಕೋಲಾರಕ್ಕೆ ಕಾರ್ಯಕ್ರಮಕ್ಕೆ ಬಂದಾಗ ಪ್ರದಾನ ಮಾಡಲಾಗುವುದು' ಎಂದರು.

ADVERTISEMENT

ಘಟಿಕೋತ್ಸವದಲ್ಲಿ 377 ವಿದ್ಯಾರ್ಥಿಗಳಿಗೆ ಪದವಿ ಹಾಗೂ 23 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಬೆಂಗಳೂರಿನ ಕಿದ್ವಾಯಿ ಸಂಸ್ಥೆಯ ಮಾಜಿ ನಿರ್ದೇಶಕಿ ಡಾ.ದೇಶಮಾನೆ ವಿಜಯಲಕ್ಷ್ಮಿ ಹಾಗೂ ಶ್ರೀ ದೇವರಾಜ ಅರಸು ಶೈಕ್ಷಣಿಕ ಟ್ರಸ್ಟ್‌ ಉಪಾಧ್ಯಕ್ಷ ಜೆ.ರಾಜೇಂದ್ರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.