ADVERTISEMENT

ಆಸ್ಪತ್ರೆ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 14:48 IST
Last Updated 23 ಜನವರಿ 2019, 14:48 IST
ಕೋಲಾರದ ಗಾಂಧಿನಗರ ಬಡಾವಣೆ ಸರ್ಕಾರಿ ಆರೋಗ್ಯ ಕೇಂದ್ರದ ನವೀಕರಣ ಕಾಮಗಾರಿಯನ್ನು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಬುಧವಾರ ಪರಿಶೀಲಿಸಿದರು.
ಕೋಲಾರದ ಗಾಂಧಿನಗರ ಬಡಾವಣೆ ಸರ್ಕಾರಿ ಆರೋಗ್ಯ ಕೇಂದ್ರದ ನವೀಕರಣ ಕಾಮಗಾರಿಯನ್ನು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಬುಧವಾರ ಪರಿಶೀಲಿಸಿದರು.   

ಕೋಲಾರ: ನಗರದ ಗಾಂಧಿನಗರ ಬಡಾವಣೆಯಲ್ಲಿ ನಡೆಯುತ್ತಿರುವ ಸರ್ಕಾರಿ ಆರೋಗ್ಯ ಕೇಂದ್ರದ ನವೀಕರಣ ಕಾಮಗಾರಿಯನ್ನು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಬುಧವಾರ ಪರಿಶೀಲನೆ ಮಾಡಿದರು.

‘ಗಾಂಧಿನಗರ ವಾರ್ಡ್‌ನಲ್ಲಿದ್ದ ಹಳೆ ಆಸ್ಪತ್ರೆಯನ್ನು ₹ 15 ಲಕ್ಷ ವೆಚ್ಚದಲ್ಲಿ ನವೀಕರಿಸಲಾಗುತ್ತಿದೆ. ಬಡ ರೋಗಿಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶಕ್ಕಾಗಿ ಆಸ್ಪತ್ರೆ ನವೀಕರಣ ಮಾಡಲಾಗುತ್ತಿದೆ. ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ನಾರಾಯಣಸ್ವಾಮಿ ಹೇಳಿದರು.

‘ಗಾಂಧಿನಗರ ನಿವಾಸಿಗಳು ಚಿಕಿತ್ಸೆಗಾಗಿ ನಗರದೊಳಗಿನ ಆಸ್ಪತ್ರೆಗಳಿಗೆ ಹೋಗಿ ಬರಲು ಆಟೊ ಪ್ರಯಾಣಕ್ಕೆ ಸಾಕಷ್ಟು ಹಣ ಖರ್ಚು ಮಾಡುವಂತಾಗಿದೆ. ಹೀಗಾಗಿ ಬಡ ರೋಗಿಗಳ ಅನುಕೂಲಕ್ಕೆ ಗಾಂಧಿನಗರದಲ್ಲೇ ಹೆಚ್ಚಿನ ವೈದ್ಯಕೀಯ ಸೇವೆ ಲಭಿಸುವಂತೆ ಮಾಡಲಾಗುತ್ತಿದೆ. ಸರ್ಕಾರ ಹೊಸ ಕೊಠಡಿಗಳ ಜತೆಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣ ನೀಡಿದರೆ ಈ ಭಾಗದ ಜನರಿಗೆ ಮತ್ತಷ್ಟು ಅನುಕೂಲವಾಗುತ್ತದೆ’ ಎಂದರು.

ADVERTISEMENT

ನಗರಸಭೆ ಆಯುಕ್ತ ಸತ್ಯನಾರಾಯಣ, ಸದಸ್ಯ ವೆಂಕಟೇಶ್‌ಪತಿ, ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಸುಧಾಕರ್‌ಶೆಟ್ಟಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.