ADVERTISEMENT

ಗಡಿಭಾಗದಲ್ಲಿ ಪುಂಡಾಟಿಕೆ ಮುಂದುವರಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2025, 11:44 IST
Last Updated 24 ಫೆಬ್ರುವರಿ 2025, 11:44 IST
<div class="paragraphs"><p>ಶಿವರಾಜ ತಂಗಡಗಿ</p></div>

ಶಿವರಾಜ ತಂಗಡಗಿ

   

ಕೋಲಾರ: ‘ಬೆಳಗಾವಿ ಗಡಿಭಾಗದಲ್ಲಿ ಪುಂಡಾಟಿಕೆ ಮಾಡುವವರಿಗೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದೇವೆ. ಹೀಗೆಯೇ ಮುಂದುವರಿದರೆ ಮುಂದಿನ ಪರಿಣಾಮ ನೆಟ್ಟಗಿರುವುದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಎಚ್ಚರಿಕೆ ನೀಡಿದರು.

ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಹಾಗೂ ಜಿಲ್ಲಾಡಳಿತದೊಂದಿಗೆ ಈ ಸಂಬಂಧ ಮಾತನಾಡಿದ್ದೇವೆ. ಪುಂಡರ ಮೇಲೆ ನೇರವಾಗಿ ಕ್ರಮ ವಹಿಸಲಾಗುವುದು. ಬೆಳಗಾವಿ ನಮ್ಮ ರಾಜ್ಯದ ಪ್ರಮುಖ ಅಂಗ. ಅಲ್ಲೇ ಸುವರ್ಣಸೌಧ ನಿರ್ಮಿಸಿದ್ದೇವೆ. ಕಾನೂನು ಸುವವಸ್ಥೆಗೆ ಧಕ್ಕೆ ಉಂಟು ಮಾಡುವವರನ್ನು ಸುಮ್ಮನೇ ಬಿಡುವುದಿಲ್ಲ’ ಎಂದರು.

ADVERTISEMENT

ಮುಖ್ಯಮಂತ್ರಿ ಸ್ಥಾನ ಇರುವುದೇ ದಾಖಲೆ ಮುರಿಯಲು ಎಂದಿರುವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದು ದಾಖಲೆ ಮುರಿಯಲು ಅಲ್ಲ. ರಾಜ್ಯ ಅಭಿವೃದ್ಧಿಗಾಗಿ ಅವರು ಶ್ರಮಿಸುತ್ತಿದ್ದಾರೆ’ ಎಂದು ಹೇಳಿದರು.

‘ಎಸ್‌ಟಿಪಿ, ಟಿಎಸ್‌ಪಿ ಯೋಜನೆ ತಂದಿದ್ದು ಯಾರು ಎಂಬ ಪ್ರಶ್ನೆಯನ್ನು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಬಳಿ ಕೇಳಿ. ಅವರಿಗೆ ತಾಕತ್ತು ಇದ್ದರೆ, ಪರಿಶಿಷ್ಟರ ಬಗ್ಗೆ ಕಾಳಜಿ ಇದ್ದರೆ ದೇಶದಾದ್ಯಂತ ಏಕೆ ಜಾರಿ ಮಾಡಬಾರದು? ಪ್ರಧಾನಿ ಮೋದಿ ಅವರಿಗೆ ಹೋಗಿ ಹೇಳಲಿ. ಬಜೆಟ್‌ನಲ್ಲಿ ಶೇ 24.1ರಷ್ಟು ಅನುದಾನ ಮೀಸಲಿಡಲಿ ನೋಡೋಣ’ ಎಂದು ಸವಾಲು ಹಾಕಿದರು.

‘ಈ ತಾಕತ್ತು ಬಿಜೆಪಿಯವರಿಗೆ ಎಲ್ಲಿದೆ? ಹಿಂದೆ ಪರಿಶಿಷ್ಟರಿಗೆ ಕೇವಲ ₹ 3 ಸಾವಿರ ಕೋಟಿ ಅನುದಾನ ತೆಗೆದಿರಿಸುತ್ತಿದ್ದರು. ನಮ್ಮ ಸರ್ಕಾರ ಈಗ ₹ 35 ಸಾವಿರ ಕೋಟಿ ಅನುದಾನ ನಿಗದಿಪಡಿಸಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.