
ಬೇತಮಂಗಲ: ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗಳಿಗೆ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ, ರಾಷ್ಟ್ರೀಯ ರಕ್ಷಣೆ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ಮತ್ತು ಕಾರ್ಯಕರ್ತರು ಲಾರಿ ಹಾಗೂ ಚಾಲಕನನ್ನು ಹಿಡಿದಿದ್ದಾರೆ.
ಹೋಬಳಿಯ ಕೊತ್ತೂರು ಗ್ರಾಮದಲ್ಲಿ ಸೋಮವಾರ ರಾತ್ರಿ ವಶಕ್ಕೆ ಪಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಚಾಲಕ ಸೈಯದ್ ಎಂಬುವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಮಾಯಕರನ್ನು ಈ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿರುವ ಕಾರ್ಯಕರ್ತರು, ಮತ್ತೆ ಈ ಕೃತ್ಯ ಎಸಗದಂತೆ ಎಚ್ಚರಿಕೆ ನೀಡಿದ್ದಾರೆ.
ಗಡಿಯಲ್ಲಿ ಜಾನುವಾರುಗಳ ಸಾಗಣೆಯ ಹೆಚ್ಚಿನ ಪ್ರಕರಣಗಳು ನಡೆಯುತ್ತಿವೆ. ಇದನ್ನು ತಡೆಯಲು ಈಗಿರುವ ಪೊಲೀಸರ ಸಂಖ್ಯೆ ಸಾಕಾಗುವುದಿಲ್ಲ. ಗೋವುಗಳನ್ನು ರಕ್ಷಿಸಲು ಗೋರಕ್ಷಕ ದಳ ರಚಿಸಬೇಕು ಎಂದು ಆಗ್ರಹಿಸಿದ್ದಾರೆ. 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.