ADVERTISEMENT

ಕೋಲಾರದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌, ಡಿಟೋನೇಟರ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 18:14 IST
Last Updated 2 ಮಾರ್ಚ್ 2026, 18:14 IST
   

ಕೋಲಾರ: ತಾಲ್ಲೂಕಿನ ತಲಗುಂದ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್‌ ಕಡ್ಡಿಗಳು ಹಾಗೂ ಡಿಟೋನೇಟರ್‌ ಪತ್ತೆಯಾಗಿವೆ.

ವೇಮಗಲ್‌ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಗ್ರಾಮದ ಮೆಹಬೂಬ್ ಪಾಷಾ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಜಮೀನಿನಲ್ಲಿನ ಬಂಡೆ ಸ್ಫೋಟಕ್ಕೆ ಬಳಸಲು ತಂದಿದ್ದಾಗಿ ಆತ ಹೇಳಿದ್ದು, ಜಿಲೆಟಿನ್‌ ಕಡ್ಡಿಗಳು ಹಾಗೂ ಡಿಟೋನೇಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಶ್ವಾನದಳ, ಸೋಕೊ ತಂಡ ಪರಿಶೀಲನೆ ನಡೆಸಿದ್ದು, ಎಲ್ಲಿಂದ ತರಲಾಗಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.