ಬೇತಮಂಗಲ: ಕೆಜಿಎಫ್ ಕ್ಷೇತ್ರದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಬುಧವಾರ ಪ್ರತಿಭಟನೆ ನಡೆಸಲಿವೆ ಎಂದು ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಲಕ್ಷ್ಮಿನಾರಾಯಣ ಶರ್ಮಾ ತಿಳಿಸಿದರು.
ಸುಂದರಪಾಳ್ಯ ಗ್ರಾಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ರೂಪಕಲಾ ಶಶಿಧರ್ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗೆ ಯಾವುದೇ ಅಡ್ಡಿ ಇಲ್ಲ. ಆದರೆ, ಅಭಿವೃದ್ಧಿ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವುದಕ್ಕೆ ವಿರುದ್ಧವಾಗಿ ಹೋರಾಟ ನಡೆಸಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.