ಕೆಜಿಎಫ್: ಬಾಲ್ಯ ವಿವಾಹ, ಪೋಕ್ಸೊ ಹಾಗೂ ಮಕ್ಕಳ ದತ್ತು ನೀಡುವ ಪ್ರಕ್ರಿಯೆಯಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ವಸ್ತುನಿಷ್ಠವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಲಿತ ರೈತಸೇನೆ ರಾಜ್ಯ ಘಟಕದ ಅಧ್ಯಕ್ಷ ಹುಣಸನಹಳ್ಳಿ ಎನ್. ವೆಂಕಟೇಶ್ ಒತ್ತಾಯಿಸಿದರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ಹುಣಸನಹಳ್ಳಿ ಎನ್. ವೆಂಕಟೇಶ್, ‘ಬಾಲ ಗರ್ಭಿಣಿ ಕುಟುಂಬದವರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಕಲ್ಯಾಣ್‌ಕುಮಾರ್ ಅವರನ್ನು ಬಂಧಿಸಲಾಗಿದೆ. ಈ ಕುರಿತು ಕೂಲಂಕಷವಾಗಿ ತನಿಖೆ ಕೈಗೊಂಡು, ಕುಮಾರ್ ಅವರ ಹಿಂದೆ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯನ್ನು ಬಂಧಿಸಿ, ವಿಚಾರಣೆ ಮಾಡಬೇಕು’ ಎಂದು ಆಗ್ರಹಿಸಿದರು.
ಈ ಹಿಂದೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಡಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ಮಗು ಮರಣದ ಪ್ರಕರಣದಲ್ಲಿ ದೂರು ದಾಖಲಾಗಿತ್ತು. ಈ ಸಂಬಂಧ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ವಜಾಗೊಳಿಸಲು ಪ್ರಧಾನ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸರ್ಕಾರಿ ವಿಶೇಷ ದತ್ತು ಸಂಸ್ಥೆಯನ್ನು ಕೆಜಿಎಫ್ ನಗರದಲ್ಲಿರುವ ಬಾಲ ಮಂದಿರಗಳಿಗೆ ಸ್ಥಳಾಂತರ ಮಾಡಲು ಆದೇಶ ಮಾಡಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದ ನಾಗರತ್ನ ಅವರು ನಿರ್ದೇಶಕರ ಆದೇಶ ಉಲ್ಲಂಘಿಸಿ ಕಲ್ಯಾಣ ಕುಮಾರ್ ಅವರನ್ನು ಆಪ್ತ ಸಮಾಲೋಚಕರಾಗಿ ನೇಮಿಸಲಾಗಿತ್ತು. ಅವರ ಮೂಲಕ ಅಕ್ರಮವಾಗಿ ಹಣ ಮಾಡುವ ಆಲೋಚನೆಯಿಂದ ಮಕ್ಕಳ ಸಹಾಯವಾಣಿ ಸಂಯೋಜಕ ಹುದ್ದೆಗೆ ನೇಮಕ ಪ್ರಕ್ರಿಯೆ ಉಲ್ಲಂಘಿಸಿ, ಹೊರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲಾಗಿದೆ ಎಂದು ದೂರಿದರು.
ಮಕ್ಕಳ ಸಹಾಯವಾಣಿ ಬರುವ ಬಾಲ್ಯ ವಿವಾಹ, ಪೋಕ್ಸೊ ಹಾಗೂ ದತ್ತು ಪ್ರಕ್ರಿಯೆಗೆ ಒಳಪಡುವ ಮಕ್ಕಳ ಪ್ರಕರಣಗಳಲ್ಲಿ ನಾಗರತ್ನ ಅವರು ಕಲ್ಯಾಣ್‌ಕುಮಾರ್ ಮೂಲಕ ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಸಂಪಾದಿಸಿದ್ದಾರೆ. ನಕಲಿ ಜನನ ಪ್ರಮಾಣಪತ್ರಗಳನ್ನು ಸೃಷ್ಟಿಸಿ, ನಿಶ್ಚಿತಾರ್ಥದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಂದ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಇದರಿಂದಾಗಿ ಗರ್ಭಿಣಿಯರ ಸಂಖ್ಯೆ ಅಧಿಕವಾಗಿವೆ ಎಂದು ದೂರಿದರು.
ಮಿಷನ್ ವಾತ್ಸಲ್ಯ ಯೋಜನೆ ಅಡಿ ಬಿಡುಗಡೆಯಾಗುತ್ತಿರುವ ಕೋಟ್ಯಾಂತರ ರೂಪಾಯಿಗಳನ್ನು ಮಕ್ಕಳ ಹಿತದೃಷ್ಟಿಗೆ ಬಳಸದೆ, ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಬಾಲ ಮಂದಿರಗಳಲ್ಲಿನ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಲ್ಲ. ಖರೀದಿಗಳಲ್ಲಿ ಪಾರದರ್ಶಕತೆ ಕಾಪಾಡಿಕೊಂಡಿಲ್ಲ. ಬಾಲ ಮಂದಿರಗಳ ಕಟ್ಟಡದ ದುರಸ್ತಿಗೆ ಮಂಜೂರು ಆಗಿರುವ ಅನುದಾನವನ್ನು ಕ್ರಿಯಾಯೋಜನೆಯಂತೆ ಕಾಮಗಾರಿ ಮಾಡದೆ, ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಕಾಮಗಾರಿಗಳನ್ನು ಅರ್ಧಂಬರ್ಧ ಮಾಡಿ, ಹಣ ಕಬಳಿಸಲಾಗಿದೆ ಎಂದು ಆರೋಪಿಸಿದರು.
ಬಾಲ ಗರ್ಭಿಣಿ ಪ್ರಕರಣದಲ್ಲಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದಲ್ಲಿ ಸಂಯೋಜಕ ಕಲ್ಯಾಣ ಕುಮಾರ್ ಜೊತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ಅವರೂ ಭಾಗಿಯಾದ ಸಾಧ್ಯತೆ ಇದೆ. ಅವರನ್ನೂ ಬಂಧಿಸಿ, ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮದಿವಣ್ಣನ್, ಶಾಂತಮ್ಮ, ಕಲಾವಿದ ಯಲ್ಲಪ್ಪ, ಸಕ್ಕನಹಳ್ಳಿ ಮುನಿರಾಜು, ದೇಶಿಹಳ್ಳಿ ಲಕ್ಷö್ಮಮ್ಮ, ಹುಲಿಬೆಲೆ ಲಲಿತಮ್ಮ, ಕದಿರೇನಹಳ್ಳಿ ಕುಮಾರ್, ಬನಹಳ್ಳಿ ನವೀನ್, ಐವಾರಹಳ್ಳಿ ಲೋಕೇಶ್ ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ನಾಗರತ್ನ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಮಕ್ಕಳ ಸಹಾಯವಾಣಿ ಸಂಯೋಜಕ ಕಲ್ಯಾಣ್ ಕುಮಾರ್ ಸೇರಿ ಬಾಲ್ಯ ವಿವಾಹ, ಪೋಕ್ಸೋ ಹಾಗೂ ಮಕ್ಕಳನ್ನು ದತ್ತು ನೀಡುವ ಪ್ರಕ್ರಿಯೆಯಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ರೈತಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ಎನ್.ವೆಂಕಟೇಶ್ ಆಗ್ರಹಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು, ಬಾಲ ಗರ್ಭಿಣಿಯ ಕುಟುಂಬದವರಿಗೆ ಬೆದರಿಕೆಯನ್ನು ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಜಿಲ್ಲಾ ಮಕ್ಕಳ ಸಹಾಯವಾಣಿಯ ಸಂಯೋಜಕ ಕಲ್ಯಾಣ್‌ಕುಮಾರ್ ರವರನ್ನು ಬಂಧಿಸಿದ್ದು, ಕೂಲಂಕುಷವಾಗಿ ತನಿಖೆ ಮಾಡಿ ಕಲ್ಯಾಣ ಕುಮಾರ್ ರವರ ಹಿಂದೆ ಇರುವಂತಹ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯನ್ನು ಬಂಧಿಸಿ ವಿಚಾರಣೆ ಮಾಡಬೇಕು,
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.