ಕೋಲಾರ: ಮಾಲೂರು ತಾಲ್ಲೂಕು ಗುಂಡ್ಲಪಾಳ್ಳ ಗ್ರಾಮದ ಬಳಿ ಅಕ್ರಮವಾಗಿ ಗಣಿಗಾರಿಕೆ ನಡೆಸಿ ಕಲ್ಲು ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಮಾಸ್ತಿ ಠಾಣೆ ಪೊಲೀಸರು ಶನಿವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ರಾತ್ರೋರಾತ್ರಿ ಕಲ್ಲು ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ತಮಿಳುನಾಡಿಗೆ ಅಕ್ರಮವಾಗಿ ಕಲ್ಲು ಸಾಗಾಟ ಮಾಡುತ್ತಿದ್ದಾಗ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಹೊಂದಿತ್ತು.
ಇಲಾಖೆ ಉಪನಿರ್ದೇಶಕ ಕೋದಂಡರಾಮಯ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.