ADVERTISEMENT

ಶೀಘ್ರ ಮಿನಿ ವಿಧಾನಸೌಧ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 4:36 IST
Last Updated 16 ಸೆಪ್ಟೆಂಬರ್ 2022, 4:36 IST
ಕೆಜಿಎಫ್‌ ರಾಬರ್ಟಸನ್‌ಪೇಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ವೆಂಕಟರಾಜಾ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಕೆ.ಎನ್‌. ಸುಜಾತ, ಪೌರಾಯುಕ್ತೆ ಡಾ.ಮಾಧವಿ ಇದ್ದರು
ಕೆಜಿಎಫ್‌ ರಾಬರ್ಟಸನ್‌ಪೇಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ವೆಂಕಟರಾಜಾ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಕೆ.ಎನ್‌. ಸುಜಾತ, ಪೌರಾಯುಕ್ತೆ ಡಾ.ಮಾಧವಿ ಇದ್ದರು   

ಕೆಜಿಎಫ್‌: ರಾಬರ್ಟಸನ್‌ಪೇಟೆಯಲ್ಲಿ ನಿರ್ಮಾಣವಾಗುತ್ತಿರುವ ಮಿನಿ ವಿಧಾನಸೌಧದ ಕಟ್ಟಡ ಕಾಮಗಾರಿ ಬಹುತೇಕ ಮುಗಿದಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಯಾಗಲಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಹೇಳಿದರು.

ಮಿನಿ ವಿಧಾನಸೌಧಕ್ಕೆ ಗುರುವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.

ಮೊದಲ ಅಂತಸ್ತಿನ ಕಾಮಗಾರಿ ಬಹುತೇಕ ಮುಗಿದಿದೆ. ಇನ್ನೊಂದು ವಾರದೊಳಗೆ ಕಚೇರಿಗಳು ಕಾರ್ಯ ನಿರ್ವಹಿಸುವ ಮಟ್ಟಿಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಕಂದಾಯ ಇಲಾಖೆ ಇಲ್ಲಿಗೆ ವರ್ಗಾವಣೆಯಾದ ನಂತರ ಇತರೆ ಇಲಾಖೆಗಳು ಹಂತ ಹಂತವಾಗಿ ವರ್ಗಾವಣೆಯಾಗಲಿವೆ ಎಂದರು.

ADVERTISEMENT

ಉದ್ಘಾಟನೆಗೆ ಕಂದಾಯ ಸಚಿವರು ಬರುವ ನಿರೀಕ್ಷೆ ಇದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ಜೊತೆ ಸಮಾಲೋಚನೆ ನಡೆಸಿ ಉದ್ಘಾಟನೆಯ ದಿನಾಂಕವನ್ನು ಪ್ರಕಟಿಸಲಾಗುವುದು. ಕಟ್ಟಡದ ಸುರಕ್ಷತೆಗೆ ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾ ಗುವುದು ಎಂದು ಮಾಹಿತಿ ನೀಡಿದರು.

ತಹಶೀಲ್ದಾರ್ ಕೆ.ಎನ್‌. ಸುಜಾತ, ನಗರಸಭೆ ಪೌರಾಯುಕ್ತೆ ಡಾ.ಮಾಧವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.