ADVERTISEMENT

ಸೋಂಕು ಹರಡುವಿಕೆ ದಾಖಲೆ ಏರಿಕೆ

​ಪ್ರಜಾವಾಣಿ ವಾರ್ತೆ
Published 5 ಮೇ 2021, 15:02 IST
Last Updated 5 ಮೇ 2021, 15:02 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹೊಸದಾಗಿ 971 ಮಂದಿಗೆ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 4,129ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 322 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಉಳಿದಂತೆ ಮಾಲೂರು ತಾಲ್ಲೂಕಿನ 170 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 141 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 142 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 134 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 62 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 511 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ಕೋಲಾರ ತಾಲ್ಲೂಕಿನ 142 ಮಂದಿ, ಮಾಲೂರು ತಾಲ್ಲೂಕಿನ 94, ಬಂಗಾರಪೇಟೆ ತಾಲ್ಲೂಕಿನ 93, ಕೆಜಿಎಫ್‌ ತಾಲ್ಲೂಕಿನ 79, ಮುಳಬಾಗಿಲು ತಾಲ್ಲೂಕಿನ 51 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 52 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.