ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 22 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 114ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 10 ಮಂದಿ, ಮಾಲೂರು ತಾಲ್ಲೂಕಿನ ಇಬ್ಬರು, ಬಂಗಾರಪೇಟೆ ತಾಲ್ಲೂಕಿನ 4, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಇಬ್ಬರು, ಮಾಲೂರು ತಾಲ್ಲೂಕಿನ 4 ಮಂದಿ ಹಾಗೂ ಕೆಜಿಎಫ್ ತಾಲ್ಲೂಕಿನ 3 ಮಂದಿಯನ್ನು ಮನೆಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.