ADVERTISEMENT

ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2021, 14:37 IST
Last Updated 3 ಏಪ್ರಿಲ್ 2021, 14:37 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 34 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 17 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 8 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 5 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 39 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೆಜಿಎಫ್‌ ತಾಲ್ಲೂಕಿನ 12 ಮಂದಿ, ಮುಳಬಾಗಿಲು ತಾಲ್ಲೂಕಿನ 10 ಮಂದಿ, ಕೋಲಾರ ತಾಲ್ಲೂಕಿನ 7, ಶ್ರೀನಿವಾಸಪುರ ತಾಲ್ಲೂಕಿನ 5, ಮಾಲೂರು ತಾಲ್ಲೂಕಿನ ಇಬ್ಬರು, ಬಂಗಾರಪೇಟೆ ತಾಲ್ಲೂಕಿನ ಮೂವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.