ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 3 ಮಂದಿಗೆ, ಮಾಲೂರು ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಒಬ್ಬರು, ಕೆಜಿಎಫ್ ತಾಲ್ಲೂಕಿನ ಇಬ್ಬರನ್ನು ಮನೆಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.