ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 3 ಮಂದಿಗೆ, ಮಾಲೂರು ಹಾಗೂ ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಮುಳಬಾಗಿಲು ತಾಲ್ಲೂಕಿನ ಒಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.