ADVERTISEMENT

ಬೇತಮಂಗಲ | ವಿದ್ಯಾರ್ಥಿಗಳಿಂದ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 4:04 IST
Last Updated 16 ಆಗಸ್ಟ್ 2025, 4:04 IST

ಬೇತಮಂಗಲ: ಇಲ್ಲಿನ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಆವರಣದಲ್ಲಿ ಬೆಳಗ್ಗೆ ಧ್ವಜಾರೋಹಣ ನೆರವೇರಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು ಪಥಸಂಚಲನ ನಡೆಸುವ ಮೂಲಕ ದೇಶದ ಐಕ್ಯತೆ, ಸಮಗ್ರತೆ ಹಾಗೂ ಒಗ್ಗಟ್ಟಿನ ಕುರಿತು ಜಾಗೃತಿ ಮೂಡಿಸಲಾಯಿತು.

ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ವಿವಿಧ ದೇಶ ಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು. ಜೊತೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುವಿನಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು.

ADVERTISEMENT

ಶಾಲಾ ಕಾರ್ಯದರ್ಶಿ ಅ.ಮು.ಲಕ್ಷ್ಮೀನಾರಾಯಣ್, ಪ್ರಭಾಕರ್, ಮಂಜುಳಾ, ಮಲ್ಲಿಕಾರ್ಜುನ್, ವಿಜಯಲಕ್ಷ್ಮಿ, ಲಹರಿ, ಗಂಗೂಲಪ್ಪ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.