ಮಾಲೂರು: ತಾಲ್ಲೂಕಿನಲ್ಲಿ ಹೊಸದಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟಿನ್ ಅನ್ನು ಶಾಸಕ ಕೆ.ವೈ. ನಂಜೇಗೌಡ ಭಾನುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ‘ತಾಲ್ಲೂಕಿನ ಜನರ ಬಹುದಿನಗಳ ಕನಸು ನನಸು ಆಗುತ್ತಿರುವುದು ಸಂತಸ’ ಎಂದು ಹೇಳಿದರು.
ಸಿದ್ದರಾಮಯ್ಯು ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗಲೇ ಮಾಲೂರಿನಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಅನುಮತಿ ನೀಡಿದ್ದರು. ಆದರೆ, ಇಲ್ಲಿನ ವಿರೋಧ ಪಕ್ಷದವರು ಕ್ಯಾಂಟಿನ್ ಸ್ಥಾಪನೆಗೆ ಅವಕಾಶ ನೀಡಲಿಲ್ಲ. ಕ್ಯಾಂಟಿನ್ ನಿರ್ಮಾಣ ಮಾಡಲು ಗುರುತಿಸಲಾಗಿದ್ದ ಸ್ಥಳದ ಮೇಲೆ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು. ಇದರಿಂದಾಗಿ ಕ್ಯಾಂಟಿನ್ ಸ್ಥಾಪನೆ ವಿಳಂಬವಾಯಿತು ಎಂದರು.
ರಾಜ್ಯ ಸರ್ಕಾರ ಹಾಗೂ ಪುರಸಭೆಯಿಂದ ಸುಮಾರು ₹1ಕೋಟಿ ವೆಚ್ಚದಲ್ಲಿ ಹವಾ ನಿಯಂತ್ರಿತ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ. ಗ್ರಾಮೀಣ ಭಾಗಗಳಿಂದ ಬರುವ ರೈತರು, ವಿದ್ಯಾರ್ಥಿಗಳು ಹಾಗೂ ಬಡವರಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ರತ್ನಮ್ಮ ನಂಜೇಗೌಡ, ತಹಶೀಲ್ದಾರ್ ಎಂ.ವಿ.ರೂಪ, ಪುರಸಭಾಧ್ಯಕ್ಷೆ ವಿಜಯಲಕ್ಷ್ಮಿ, ಮುಖ್ಯಾಧಿಕಾರಿ ಪ್ರದೀಪ್, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೃಷ್ಣಪ್ಪ, ಸಿ.ಲಕ್ಷ್ಮಿನಾರಾಯಣ್, ರಾಜಪ್ಪ, ವೇಮನ, ಮುರಳಿಧರ್, ಅಹಮದ್ ನಯುಂ, ದಿನೇಶ್ ಗೌಡ, ಹನುಮಂತರೆಡ್ಡಿ, ಸತೀಶ್ ರಾಜಣ್ಣ, ಶ್ರೀನಿವಾಸ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.