ADVERTISEMENT

23 ವಿದ್ಯಾರ್ಥಿನಿಯರಿಗೆ ಸೋಂಕು: ಬಾಲಕಿಯರ ಕಾಲೇಜು ಸೀಲ್‌ಡೌನ್‌

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 3:52 IST
Last Updated 25 ಜನವರಿ 2022, 3:52 IST
ಬಂಗಾರಪೇಟೆಯ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜಿನಲ್ಲಿ ಸೋಮವಾರ ಆರೋಗ್ಯ ಇಲಾಖೆ ಸಿಬ್ಬಂದಿ ವಿದ್ಯಾರ್ಥಿನಿಯರ ಮೂಗು ಹಾಗೂ ಗಂಟಲು ದ್ರವ ಸಂಗ್ರಹಿಸಿದರು
ಬಂಗಾರಪೇಟೆಯ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜಿನಲ್ಲಿ ಸೋಮವಾರ ಆರೋಗ್ಯ ಇಲಾಖೆ ಸಿಬ್ಬಂದಿ ವಿದ್ಯಾರ್ಥಿನಿಯರ ಮೂಗು ಹಾಗೂ ಗಂಟಲು ದ್ರವ ಸಂಗ್ರಹಿಸಿದರು   

ಬಂಗಾರಪೇಟೆ: ಪಟ್ಟಣದ ಸರ್ಕಾರಿ ಬಾಲಕಿಯರ ಜೂನಿಯರ್ ಕಾಲೇಜಿನಲ್ಲಿ 23 ವಿದ್ಯಾರ್ಥಿನಿಯರು ಹಾಗೂ ಇಬ್ಬರು ಉಪನ್ಯಾಸಕರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಶಾಸಕ ಎಸ್.ಎನ್. ನಾರಾಯಣಸ್ವಾಮಿ, ತಾಲ್ಲೂಕು ಆರೋಗ್ಯಾಧಿಕಾರಿ, ಉಪ ನಿರ್ದೇಶಕರೊಂದಿಗೆ ಚರ್ಚಿಸಿ ಐದು ದಿನಗಳ ಕಾಲ ಕಾಲೇಜನ್ನು ಸೀಲ್‌ಡೌನ್ ಮಾಡಲಾಗಿದೆ.

ಒಟ್ಟು 55 ವಿದ್ಯಾರ್ಥಿನಿಯರು ಹಾಗೂ ಮೂವರು ಉಪನ್ಯಾಸಕರಿಗೆ ಶುಕ್ರವಾರ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಸೋಮವಾರ ವರದಿ ಬಂದಿದೆ.

ADVERTISEMENT

ಕಾಲೇಜಿನಲ್ಲಿ ಒಟ್ಟು 21 ಉಪನ್ಯಾಸಕರಿದ್ದು ಉಳಿದ 18 ಉಪನ್ಯಾಸಕರ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಲಾಗಿದೆ. ಒಟ್ಟು 940 ವಿದ್ಯಾರ್ಥಿನಿಯರಿದ್ದು, ಆ ಪೈಕಿ ಸೋಂಕಿತ ವಿದ್ಯಾರ್ಥಿನಿಯರ ಪಕ್ಕದಲ್ಲಿ ಕುಳಿತಿದ್ದ ಸುಮಾರು 25 ವಿದ್ಯಾರ್ಥಿನಿಯರಿಂದ ಸೋಮವಾರ ಮಾದರಿ
ಸಂಗ್ರಹಿಸಲಾಗಿದೆ.

‘ಕೆಲವು ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜ. 25 ರಿಂದ 29ರ ತನಕ ಆನ್‌ಲೈನ್ ತರಗತಿಗಳು ನಡೆಯಲಿವೆ.
ಎಲ್ಲಾ ವಿದ್ಯಾರ್ಥಿನಿಯರು ಅಗತ್ಯ ಸಿದ್ಧತೆ ಮಾಡಿಕೊಂಡು ತಪ್ಪದೆ ಆನ್‌ಲೈನ್ ತರಗತಿಗಳಿಗೆ ಹಾಜರಾಗಬೇಕು. ಕಾಲೇಜಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ಉಪನ್ಯಾಸಕ ನಾಗಾನಂದ ಕೆಂಪರಾಜ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.