ADVERTISEMENT

ಬಾಲಮಂದಿರ ಮಕ್ಕಳಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 4 ಜೂನ್ 2021, 4:55 IST
Last Updated 4 ಜೂನ್ 2021, 4:55 IST

ಕೆಜಿಎಫ್‌: ನಗರದ ಮಸ್ಕಂನಲ್ಲಿರುವ ಬಾಲಮಂದಿರದ 13 ಮಕ್ಕಳಿಗೆ ಕೋವಿಡ್ ಸೋಂಕು ತಗಲಿದ್ದು, ಎಲ್ಲರನ್ನೂ ಬಿಜಿಎಂಎಲ್ ಕೋವಿಡ್ ಕೇರ್ ಸೆಂಟರ್‌ಗೆ ಸೇರಿಸಲಾಗಿದೆ.

ಬಾಲಮಂದಿರದಲ್ಲಿದ್ದ ಮೂವರು ಮಕ್ಕಳಿಗೆ ಕೋವಿಡ್ ಲಕ್ಷಣ ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಎಲ್ಲಾ ಮಕ್ಕಳಿಗೂ ರಾಪಿಡ್ ಪರೀಕ್ಷೆ ನಡೆಸುವಂತೆ ಕೋರಲಾಗಿತ್ತು. ಅದರಂತೆ ಪರೀಕ್ಷೆ ನಡೆಸಿದಾಗ ಮಕ್ಕಳಿಗೆ ಕೋವಿಡ್ ಸೋಂಕು ಇರುವುದು ಕಂಡುಬಂದಿದೆ.

ಮುನ್ನೆಚ್ಚರಿಕೆಯಾಗಿ ಎಲ್ಲಾ ಮಕ್ಕಳನ್ನು ಬಿಜಿಎಂಎಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಮಕ್ಕಳು ಮೇಲ್ನೋಟಕ್ಕೆ ಗೆಲುವಾಗಿ ಇದ್ದಾರೆ ಎಂದು ಬಾಲಮಂದಿರದ ಅಧೀಕ್ಷಕ ರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.