ADVERTISEMENT

ಕೋಲಾರದಲ್ಲಿ ಶಿಕ್ಷಕರು–ವಿದ್ಯಾರ್ಥಿಗಳಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 16:54 IST
Last Updated 5 ಜನವರಿ 2021, 16:54 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕೋಲಾರ: ವಿದ್ಯಾಗಮ ಹಾಗೂ ಎಸ್ಸೆಸ್ಸೆಲ್ಸಿ ತರಗತಿ ಆರಂಭದ ಬೆನ್ನಲ್ಲೇ ಜಿಲ್ಲೆಯಲ್ಲಿ 8 ವಿದ್ಯಾರ್ಥಿಗಳು ಮತ್ತು 9 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

ಜಿಲ್ಲಾ ಕೇಂದ್ರದ ಖಾಸಗಿ ಶಾಲೆಯೊಂದರಲ್ಲೇ 5 ಶಿಕ್ಷಕರಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ಇಬ್ಬರು ಶಿಕ್ಷಕರಿಗೆ, ಶ್ರೀನಿವಾಸಪುರ ಮತ್ತು ಮಾಲೂರು ತಾಲ್ಲೂಕಿನಲ್ಲಿ ತಲಾ ಒಬ್ಬರು ಶಿಕ್ಷಕರಿಗೆ ಸೋಂಕು ಹರಡಿದೆ.

ಕೋಲಾರ ತಾಲ್ಲೂಕಿನ 4 ಮಂದಿ ವಿದ್ಯಾರ್ಥಿಗಳಿಗೆ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ತಲಾ ಒಬ್ಬ ವಿದ್ಯಾರ್ಥಿಗೆ, ಬಂಗಾರಪೇಟೆ ತಾಲ್ಲೂಕಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ಬಂದಿರುವುದು ಖಚಿತವಾಗಿದೆ. ಸೋಂಕಿತ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಮನೆಗಳಲ್ಲೇ ಕ್ವಾರಂಟೈನ್ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.