ADVERTISEMENT

ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ಶಿಲಾನ್ಯಾಸ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 15:46 IST
Last Updated 4 ನವೆಂಬರ್ 2020, 15:46 IST
ಕೋಲಾರ ತಾಲ್ಲೂಕಿನ ಬಣಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್‌ ಬುಧವಾರ ಶಿಲಾನ್ಯಾಸ ನೆರವೇರಿಸಿದರು.
ಕೋಲಾರ ತಾಲ್ಲೂಕಿನ ಬಣಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್‌ ಬುಧವಾರ ಶಿಲಾನ್ಯಾಸ ನೆರವೇರಿಸಿದರು.   

ಕೋಲಾರ: ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್‌ ತಾಲ್ಲೂಕಿನ ಬಣಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು.

‘ತಾಲ್ಲೂಕಿನೆಲ್ಲೆಡೆ ಎಲ್ಲಾ ಹಾಲು ಸಹಕಾರ ಸಂಘಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಬಣಕನಹಳ್ಳಿಯ ನೂತನ ಕಟ್ಟಡ ನಿರ್ಮಾಣಕ್ಕೆ ಒಕ್ಕೂಟದಿಂದ ₹ 3 ಲಕ್ಷ ಮತ್ತು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 1 ಲಕ್ಷ ನೀಡಲಾಗುತ್ತದೆ’ ಎಂದು ಹರೀಶ್‌ ಹೇಳಿದರು.

‘ಹಾಲು ಒಕ್ಕೂಟದಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರು ಸ್ವಾವಲಂಬಿಗಳಾಗಬೇಕು. ಉತ್ಪಾದಕರ ಮತ್ತು ಸಂಘದ ಹಿತದೃಷ್ಟಿಯಿಂದ ಹಾಲು ಶೇಖರಣೆ ಹಾಗೂ ಹಾಲಿನ ಗುಣಮಟ್ಟ ಉತ್ತಮಪಡಿಸಬೇಕು. ಸಂಘಕ್ಕೆ ಮುಂದೆ ಕಂಪ್ಯೂಟರ್ ನೀಡಲಾಗುವುದು’ ಎಂದು ತಿಳಿಸಿದರು.

ADVERTISEMENT

ಕೋಚಿಮುಲ್‌ ತಾಲ್ಲೂಕು ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ, ಸಂಘದ ಅಧ್ಯಕ್ಷ ಸೋಮೇಗೌಡ, ಕಾರ್ಯದರ್ಶಿ ದೇವೇಗೌಡ, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್, ಎಸ್.ರಾಮಾಂಜಿನಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.