ADVERTISEMENT

ಹಾಲು ಖರೀದಿ ದರ ಹೆಚ್ಚಳಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 3:47 IST
Last Updated 9 ಜುಲೈ 2021, 3:47 IST

ಬೇತಮಂಗಲ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ದುಂದುವೆಚ್ಚ ಮತ್ತು ಬಿಎಂಸಿ ಕೇಂದ್ರಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಹಾಲು ಖರೀದಿ ದರವನ್ನು ₹ 1.50 ಹೆಚ್ಚಿಸಬೇಕು ಎಂದು ಕೋಲಾರ ಜಿಲ್ಲಾ ಸಹಕಾರ ಯೂನಿಯನ್ ಒಕ್ಕೂಟಗಳ ಅಧ್ಯಕ್ಷ ಅ.ಮು. ಲಕ್ಷ್ಮೀನಾರಾಯಣ ಒತ್ತಾಯಿಸಿದ್ದಾರೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾವಿರಾರು ರೈತರು ಹಾಲು ಉತ್ಪಾದನೆ ಮೂಲಕ ಜೀವನ ನಡೆಸುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಒಕ್ಕೂಟ ಏಕಾಏಕಿಯಾಗಿ ಹಾಲಿನ ದರವನ್ನು ಕಡಿತಗೊಳಿಸಿದೆ. ಇದರಿಂದ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಶು ಆಹಾರ, ಹಿಂಡಿ, ಬೂಸಾ ಹಾಗೂ ಪಶುಔಷಧಿ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಇದರ ನಡುವೆ ಹಾಲು ಒಕ್ಕೂಟ ಅವೈಜ್ಞಾನಿಕ ತೀರ್ಮಾನ ತೆಗೆದುಕೊಂಡಿದೆ. ಹಾಲಿನ ಬೆಲೆ ಏರಿಕೆ ಮಾಡಬೇಕು. ಇಲ್ಲವಾದರೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರೊಟ್ಟಿಗೆ ಪ್ರತಿಭಟನೆ ನಡೆಸಲಾಗುವುದು. ಹಾಲು ಉತ್ಪಾದಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.