ADVERTISEMENT

ನೀರಿನ ಸಮಸ್ಯೆ ಬಗೆಹರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 7:38 IST
Last Updated 1 ಏಪ್ರಿಲ್ 2021, 7:38 IST
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆ ನಡೆಯಿತು
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ಸಭೆ ನಡೆಯಿತು   

ದೊಡ್ಡಬಳ್ಳಾಪುರ: ತಾಲ್ಲೂಕಿನ 120 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ತಲೆದೊರಿದೆ. ಈ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಹಾಗೂ ₹87 ಲಕ್ಷ ವೆಚ್ಚದಲ್ಲಿ 27 ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ ಹೇಳಿದರು.

ಅವರು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಸದಸ್ಯ ಡಿ.ಸಿ.ಶಶಿಧರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗದೆ ಜನಪ್ರತಿನಿಧಿಗಳು ಗ್ರಾಮಗಳಲ್ಲಿ ಜನರ ಆಕ್ರೋಶಕ್ಕೆ ಒಳಗಾಗುವಂತಾಗಿದೆ. ಸಮಸ್ಯೆ ಬಗೆ ಹರಿಸಲು ಅಧಿಕಾರಿಗಳು ಮುಂದಾಗಬೇಕಿದೆ. 120 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದರು ಸಹ ಬಗೆಹರಿಸದೇ ಸಭೆಗಳನ್ನು ನಡೆಸುವುದರಲ್ಲೇ ಅಧಿಕಾರಿಗಳು ಕಾಲಾಹರಣ ಮಾಡುತ್ತಿರುವುದು ಆಡಳಿತದ ವೈಫಲ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಸದಸ್ಯ ಎಚ್‌.ವಿ.ಶ್ರೀವತ್ಸ ಮಾತನಾಡಿ, ಕ್ರಿಯಾಯೋಜನೆ ಇಲ್ಲದೆ ಕೊಳವೆಬಾವಿ ಕೊರೆಸುವುದಿಲ್ಲ ಎನ್ನುತ್ತಾ ಕಾದು ಕುಳಿತರೆ ಮೂಲ ಸೌಲಭ್ಯವಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕಷ್ಟವಾಗಲಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಮಾಹಿತಿ ನೀಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಈಗಾಗಲೇ ದಿನಾಂಕ ಘೋಷಣೆ ಮಾಡಿದ್ದು, ತಾಲ್ಲೂಕಿನಲ್ಲಿ ಪಠ್ಯಕ್ರಮ ಪೂರ್ಣಗೊಳಿಸಲಾಗಿದೆ ಎಂದರು.

ಸಭೆಯಲ್ಲಿ ಉಪಾಧ್ಯಕ್ಷೆ ಬಿ.ಎಂ.ಯಶೋದಮ್ಮ ಶಿವಕುಮಾರ್‌, ಚೆನ್ನಮ್ಮ ರಾಮಲಿಂಗಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.