ಟೇಕಲ್(ಮಾಲೂರು): ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಈಗಾಗಲೇ ಚುನಾವಣೆ ನಡೆದಿದೆ. ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಸಹಕಾರ ಸಂಘಗಳಿಗೆ ಆರ್ಥಿಕ ನೆರವು ನೀಡಿ ರೈತರಿಗೆ ಮತ್ತು ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ನೀಡಲು ಪ್ರಯತ್ನಿಸಲಾಗುವುದು ಎಂದು ಶಾಸಕ ಕೆ.ವೈ.ನಂಜೇಗೌಡರು ಭರವಸೆ ನೀಡಿದರು.
ದಿನ್ನೇರಿ ಹಾರೋಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸೋಮವಾರ ಭಾಗವಹಿಸಿ ಮತನಾಡಿದರು.
ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಈಗಾಗಲೇ ಚುನಾವಣೆ ನಡೆದಿದೆ. ಆದರೆ, ಕೆಲವು ಸ್ಥಾನಗಳ ಬಗ್ಗೆ ಆಕ್ಷೇಪ ಇದ್ದ ಕಾರಣದಿಂದ ಹೈಕೋರ್ಟ್‌ನಲ್ಲಿ ಪ್ರಕರಣ ಇರುವುದರಿಂದ ಆಡಳಿತ ಮಂಡಳಿ ರಚನೆ ಆಗಿಲ್ಲ. ಆಡಳಿತ ಮಂಡಳಿ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯ ಸಹಕಾರ ಸಂಘಗಳಿಗೆ ಸಾಲ ನೀಡಿ ರೈತರ ಅಭ್ಯುದಯಕ್ಕೆ ಶ್ರಮಿಸಲಾಗುವುದು ಎಂದರು.
ಸ್ವಸಹಾಯ ಸಂಘಗಳಿಗೆ ₹5ಲಕ್ಷವರೆಗೆ ಸಾಲ ನೀಡಲಾಗುತ್ತಿದೆ. ಇದನ್ನು ₹10ಲಕ್ಷವರೆಗೂ ಹೆಚ್ಚಿಸಲು ಯತ್ನಿಸಲಾಗುವುದು ಎಂದರು.
ಕೋಲಾರ ಹಾಲು ಒಕ್ಕೂಟದಲ್ಲಿ ಪ್ರತಿ ತಿಂಗಳು ₹2ಕೋಟಿ ವಿದ್ಯುತ್ ಬಿಲ್ ಬರುತ್ತಿದೆ. ಇದನ್ನು ತಪ್ಪಿಸಲು ಸೋಲಾರ ಪ್ಲಾಂಟ್ ಅಳವಡಿಸುವುದರಿಂದ ಕಳೆದ ತಿಂಗಳು ಶೂನ್ಯ ಬಿಲ್ ಬಂದಿದೆ. ಸೋಲಾರ್ ಪ್ಲಾಂಟ್‌ನಿಂದ ಉಳಿಕೆ ವಿದ್ಯುತ್ ಅನ್ನು ಹಾಲು ಒಕ್ಕೂಟ ವ್ಯಾಪ್ತಿಯ ಬಿಎಂಸಿ ಕೇಂದ್ರಗಳಿಗೆ ವರ್ಗಾಯಿಸಲು ರೂಪರೇಷ ಸಿದ್ಧ ಪಡಿಸಲಾಗುತ್ತಿದೆ ಎಂದರು.
ಸಂಘದ ಅಧ್ಯಕ್ಷ ನಂಜುಂಡಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ವಿ ತಿರುಮೇಗೌಡ, ಸಂಘದ ಜಮಾ-ಖರ್ಚು, ಲಾಭ-ನಷ್ಟ ಹಾಗೂ ಮುಂದಿನ ಸಾಲಿನ ಅಂದಾಜು ಬಜೆಟ್ ಬಗ್ಗೆ ಸಭೆಯಲ್ಲಿ ವಿವರಿಸಿದರು.
ಡಿಸಿಸಿ ಬ್ಯಾಂಕ್‌ಗೆ ನೂತನವಾಗಿ ಆಯ್ಕೆಯಾದ ವಿನೋದಕುಮಾರ್ ಹಾಗೂ ಹಾಲು ಒಕ್ಕೂಟಕ್ಕೆ ಆಯ್ಕೆಯಾದ ಸದಸ್ಯರನ್ನು ಅಭಿನಂದಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.