ADVERTISEMENT

ಕಲಾ ತಂಡಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 5 ಮೇ 2022, 2:31 IST
Last Updated 5 ಮೇ 2022, 2:31 IST

ಕೋಲಾರ: ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರಲ್ಲಿ ಅರಿವು ಮೂಡಿಸುವ ನಾಟಕಗಳ ಪ್ರದರ್ಶನಕ್ಕೆ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ರಂಗಮಂದಿರ ಅಥವಾ ಒಳಾಂಗಣದಲ್ಲಿ 60 ನಿಮಿಷಗಳ ಅವಧಿಗೆ ನಾಟಕ ಪ್ರದರ್ಶಿಸಬೇಕು. ಕಲಾ ತಂಡಗಳು ಪೌರ ಕಾರ್ಮಿಕರು, ಸಫಾಯಿ ಕರ್ಮಚಾರಿಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲಾವಿದರಿಂದ ರಚಿತವಾಗಿರಬೇಕು. ಪೌರ ಕಾರ್ಮಿಕ ತಂಡಗಳಿಗೆ ಆದ್ಯತೆ ನೀಡಲಾಗುವುದು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.

ಕಲಾ ತಂಡಗಳು ದಾಖಲೆ ಪತ್ರಗಳೊಂದಿಗೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ನಂ. 1/14, ಯೂನಿಟಿ ಬಿಲ್ಡಿಂಗ್ ಕಾಂಪ್ಲೆಕ್ಸ್, ಮಿಷನ್ ರೋಡ್, ಬೆಂಗಳೂರು ವಿಳಾಸಕ್ಕೆ ಮೇ 9ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 080-22240445 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.