ADVERTISEMENT

ಬೇತಮಂಗಲ: ಕೈವಾರ ತಾತಯ್ಯ ಜಯಂತಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 5:21 IST
Last Updated 4 ಮಾರ್ಚ್ 2026, 5:21 IST
<div class="paragraphs"><p>ಬೇತಮಂಗಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಯೋಗಿ ಕೈವಾರ ತಾತಯ್ಯ ಅವರ ಜಯಂತಿಯನ್ನು ಆಚರಿಸಲಾಯಿತು</p></div>

ಬೇತಮಂಗಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಯೋಗಿ ಕೈವಾರ ತಾತಯ್ಯ ಅವರ ಜಯಂತಿಯನ್ನು ಆಚರಿಸಲಾಯಿತು

   

ಬೇತಮಂಗಲ: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬಲಿಜ ಸಮುದಾಯದ ವತಿಯಿಂದ ದಾರ್ಶನಿಕ ಕೈವಾರ ತಾತಯ್ಯ ಅವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನು ಕಾರ್ತಿಕ್ ಮಾತನಾಡಿ, ತಾತಯ್ಯ ಅವರು ಹಾಕಿಕೊಟ್ಟ ಶಾಂತಿ ಮತ್ತು ಸೌಹಾರ್ದತೆಯ ಹಾದಿ ಇಂದಿನ ಸಮಾಜಕ್ಕೆ ಅತ್ಯಗತ್ಯ. ಅವರ ಜೀವನ ನಮಗೆಲ್ಲರಿಗೂ ಪ್ರೇರಣೆ ಎಂದು ತಿಳಿಸಿದರು.

ADVERTISEMENT

ಗ್ರಾ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಣೇಶ್, ಬಲಿಜ ಸಂಘದ ಅಧ್ಯಕ್ಷ ಕೆ.ಸಿ.ನಾಗರಾಜ್, ಡೇರಿ ಮಂಜುನಾಥ್, ವಿಜಯ್ ಭಾಸ್ಕರ್ ನಾಯ್ಡು, ಅಶೋಕ್, ಕಮಲೇಶ್, ಮಂಜು ಪಂಡು, ವಿನಯ್, ಸಿಬ್ಬಂದಿ ರಾಮಪ್ಪ, ಸೋಮಣ್ಣ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.