
ಪ್ರಜಾವಾಣಿ ವಾರ್ತೆ
ಕನ್ನಿಕಾ ಸಿಕ್ರಿವಾಲ್
ಕೋಲಾರ: ಕೋಲಾರ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಐಪಿಎಸ್ ಅಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಈ ಮೊದಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರನ್ನು ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಕೇಡರ್‌ನ 2018ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕನ್ನಿಕಾ ಅವರು ಈ ಮೊದಲು ಕಲಬುರಗಿ ಡಿಸಿಪಿಯಾಗಿ (ಕಾನೂನು ಹಾಗೂ ಸುವ್ಯವಸ್ಥೆ) ಕಾರ್ಯನಿರ್ವಹಿಸಿದ್ದಾರೆ.
2017ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ನಿಖಿಲ್ ಅವರನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅವರು 2024ರ ಜುಲೈ 3ರಂದು ಕೋಲಾರಕ್ಕೆ ಎಸ್‌ಪಿ ಆಗಿ ಬಂದಿದ್ದರು. ಜೊತೆಗೆ ಅವರಿಗೆ ಬಡ್ತಿಯೂ ಸಿಕ್ಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.